ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಖಂಡಿಸಿ ಪ್ರತಿಭಟನೆ

Last Updated 30 ಡಿಸೆಂಬರ್ 2017, 6:36 IST
ಅಕ್ಷರ ಗಾತ್ರ

ಬೆಳಗಾವಿ: ವಿಜಯಪುರದಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿದರು. ರಾಣಿ ಚನ್ನಮ್ಮ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆದು ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ವೇದಿಕೆಯ ಜಿಲ್ಲಾ ಸಂಚಾಲಕ ದಿಲೀಪ ಕಾಂಬಳೆ ಮಾತನಾಡಿ, ದೇಶದಲ್ಲಿ ಇತ್ತೀಚಿಗೆ ದಲಿತ ಮಹಿಳೆ ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಸರ್ಕಾರ ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ನಿಯಂತ್ರಿಸಲು ವಿಫಲವಾಗಿದೆ. ವಿಜಯಪುರ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕಾಮುಕರಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಈ ಮೂಲಕ ಪೋಷಕರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾನವ ಬಂಧುತ್ವ ವೇದಿಕೆಯ ತಾಲ್ಲೂಕು ಸಂಚಾಲಕ ಯುವರಾಜ ತಳವಾರ ಮಾತನಾಡಿ, ಅತ್ಯಾಚಾರ ಘಟನೆಯು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪೈಶಾಚಿಕ ಕೃತ್ಯವಾಗಿದೆ. ಕೂಡಲೇ ಕಾಮುಕರನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಅಧ್ಯಕ್ಷ ವಿಜಯ ತಳವಾರ, ತಾಲ್ಲೂಕು ಸಂಚಾಲಕ ಮಹಾಂತೇಶ ತಳವಾರ, ಕಾರ್ಯಕರ್ತರಾದ ಸಿದ್ದಾರ್ಥ ಚವ್ಹಾಣ, ಅಮೀತ ರಜಪೂತ, ಶೋಭಾ ಅಂಚಿ, ಅಂಜನಕುಮಾರ ಗಂಡಗುದರೆ, ಪ್ರವೀಣ ಹುಕ್ಕೇರಿ, ಈರಣ್ಣ ಗೋರವ, ರಮೇಶ ದಡ್ಡಿ, ಸಂಜಯ ಕಾಂಬಳೆ, ಬಸವರಾಜ ಇರಗಾರ, ಬಸವಣ್ಣಿ ಬಳಿಗಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT