ಶಿಡ್ಲಘಟ್ಟ

ಪಕ್ಷದ ಸಾಧನೆ ಜನರಿಗೆ ಮುಟ್ಟಿಸಿ

‘ಕಾಂಗ್ರೆಸ್ ಪಕ್ಷದ ಸಾಧನೆಯನ್ನು ಜನರಿಗೆ ಮುಟ್ಟಿಸಿ, ಪಕ್ಷವನ್ನು ಸದೃಢವಾಗಿ ಕಟ್ಟುವಂತಹ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು’

ಶಿಡ್ಲಘಟ್ಟ: ‘ಕಾಂಗ್ರೆಸ್ ಪಕ್ಷದ ಸಾಧನೆಯನ್ನು ಜನರಿಗೆ ಮುಟ್ಟಿಸಿ, ಪಕ್ಷವನ್ನು ಸದೃಢವಾಗಿ ಕಟ್ಟುವಂತಹ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು’ ಎಂದು ಕೆ.ಪಿ.ಸಿ.ಸಿ.ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ಶಿಡ್ಲಘಟ್ಟ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

‘ನಾಲ್ಕೂವರೆ ವರ್ಷದ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಈ ಸಮಾವೇಶದ ಉದ್ದೇಶವಾಗಿದೆ. ಈ ಬಾರಿ ಕಾಂಗ್ರೆಸ್ ಗೆಲ್ಲಿಸುವ ಕೆಲಸ ಮಾಡಬೇಕು’ ಎಂದರು.

‘ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಮರ್ಥ ನಾಯಕತ್ವ, ಸ್ವಚ್ಛವಾದ ಆಡಳಿತ, ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಬಡವರ ಹಸಿವು ನೀಗಿಸುವ ಕಾರ್ಯಕ್ರಮವಾಗಿದೆ’ ಎಂದರು.

‘1 ಕೋಟಿ 10 ಲಕ್ಷ ಕುಟುಂಬಗಳು ಯೋಜನೆಯ ಪ್ರಯೋಜನವಾಗಿದೆ. ಬಿಸಿಯೂಟ, ಶುದ್ಧಕುಡಿಯುವ ನೀರಾವರಿಗಾಗಿ 8 ಸಾವಿರ ಕಿರು ನೀರು ಯೋಜನೆಗಳನ್ನು, 3 ಲಕ್ಷ ಕೃಷಿ ಹೊಂಡಗಳನ್ನು ಮಾಡಿದ್ದೇವೆ’ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಿಜೆಪಿ ಸಂಸದರೊಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ನಿಯೋಗ ಹೋಗಿ ಸಾಲ ಮನ್ನಾ ಮಾಡುವಂತೆ ಮನವಿ ಮಾಡಿದರು ಬರಿಗೈಲಿ ಹಿಂದಿರುಗಬೇಕಾಯಿತು’ ಎಂದರು.

‘ಬಿಜೆಪಿ ಸರ್ಕಾರ ಒಂದು ರೂಪಾಯಿಯು ಕೊಡಲಿಲ್ಲ. ಬಿಜೆಪಿ ಆಡಳಿತದಲ್ಲಿ ಜೈಲಿಗೆ ಪರೇಡ್ ಮಾಡಿದರು. ಅಭಿವೃದ್ಧಿ ಮಾಡಲಿಲ್ಲ, ಹೊರದೇಶಗಳಿಂದ ಬಂಡವಾಳ ತರಲಿಲ್ಲ. ನಮ್ಮ ಸರ್ಕಾರ ಭ್ರಷ್ಟವಾಗಿದ್ದರೆ ಸಾಬೀತು ಮಾಡಲಿ. ಅಲ್ಪಸಂಖ್ಯಾತರ ರಕ್ಷಣೆಯಾಗಬೇಕು’ ಎಂದರು.

ಎ.ಐ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರ ಸ್ವಂತ ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿರುವುದನ್ನು ನೋಡಿದರೆ ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಅವರ ಕನಸಾಗಿದೆ’ ಎಂದರು.

‘ರಾಜ್ಯ ಸರ್ಕಾರ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಶೇ 80 ರಷ್ಟು ಈಡೇರಿಸಿದೆ. ಮೋದಿಯವರ ಭಾಷಣ ತುಂಬಾ ಚೆನ್ನಾಗಿದೆ. ಕೆಲಸ ಇಲ್ಲ, ಜೆಡಿಎಸ್ ನಮಗೆ ಲೆಕ್ಕಕ್ಕಿಲ್ಲ. ಏಪ್ರಿಲ್ ನಂತರ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮನೆ ಮನೆಗೆ ಹೋಗಿ, ಜನರಿಗೆ ಸರ್ಕಾರದ ಯೋಜನೆಗಳನ್ನು ತಿಳಿಸಿ’ ಎಂದರು.

Comments
ಈ ವಿಭಾಗದಿಂದ ಇನ್ನಷ್ಟು

ಶಿಡ್ಲಘಟ್ಟ
ಪುಸ್ತಕ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ 

ಸಮಾಜದ ಪ್ರತಿಯೊಬ್ಬರು ಪುಸ್ತಕ ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಗ್ರಂಥಪಾಲಕ ಬಚ್ಚರೆಡ್ಡಿ ತಿಳಿಸಿದರು.

24 Apr, 2018
ಮಗನ ಸಿಡಿಮಿಡಿ, ಅಪ್ಪನ ಆಶೀರ್ವಾದ

ಚಿಕ್ಕಬಳ್ಳಾಪುರ
ಮಗನ ಸಿಡಿಮಿಡಿ, ಅಪ್ಪನ ಆಶೀರ್ವಾದ

24 Apr, 2018

ಶಿಡ್ಲಘಟ್ಟ
ಕೊನೆ ಕ್ಷಣದಲ್ಲಿ ಜೆಡಿಎಸ್‌ ಬಿ.ಫಾರಂ ಗಿಟ್ಟಿಸಿ ನಾಮಪತ್ರ ಸಲ್ಲಿಸಿದ ರವಿಕುಮಾರ್

ಮೇಲೂರು ಬಿ.ಎನ್.ರವಿಕುಮಾರ್ ಅವರು ಸೋಮವಾರ ಜೆಡಿಎಸ್ ಅಭ್ಯರ್ಥಿಯಾಗಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರವನ್ನು ಸಲ್ಲಿಸಿದರು.

24 Apr, 2018

ಚಿಕ್ಕಬಳ್ಳಾಪುರ
ಐದು ದಿನಗಳಲ್ಲಿ 62 ನಾಮಪತ್ರ ಸಲ್ಲಿಕೆ

ವಿಧಾನಸಭೆ ಚುನಾವಣೆಗೆ ಜಿಲ್ಲೆಯಲ್ಲಿ ಸೋಮವಾರ ಐದು ಕ್ಷೇತ್ರಗಳ ಪೈಕಿ 25 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈವರೆಗೆ ಒಟ್ಟು 62 ಜನರು ಚುನಾವಣೆಗೆ ತಮ್ಮ ಉಮೇದುವಾರಿಕೆ...

24 Apr, 2018
‘ಚುರುಕು’ ಪಡೆದ ಫ್ಯಾನ್, ಕೂಲರ್‌ ವಹಿವಾಟು

ಚಿಕ್ಕಬಳ್ಳಾಪುರ
‘ಚುರುಕು’ ಪಡೆದ ಫ್ಯಾನ್, ಕೂಲರ್‌ ವಹಿವಾಟು

23 Apr, 2018