ಸಿದ್ದಾಪುರ

‘ಮನೆ, ಮನೆಯಲ್ಲಿ ಇರಲಿ ಕುವೆಂಪು ಸಾಹಿತ್ಯ’

‘ಪ್ರತಿಯೊಬ್ಬರ ಮನೆಯಲ್ಲಿ ಗ್ರಂಥಭಂಡಾರ ಇರಬೇಕು. ಆ ಗ್ರಂಥ ಭಂಡಾರದಲ್ಲಿ ಕುವೆಂಪು ಅವರ ಸಾಹಿತ್ಯ ಇರಬೇಕು.

ಸಿದ್ದಾಪುರ: ‘ಪ್ರತಿಯೊಬ್ಬರ ಮನೆಯಲ್ಲಿ ಗ್ರಂಥಭಂಡಾರ ಇರಬೇಕು. ಆ ಗ್ರಂಥ ಭಂಡಾರದಲ್ಲಿ ಕುವೆಂಪು ಅವರ ಸಾಹಿತ್ಯ ಇರಬೇಕು. ಅವರ ಸಾಹಿತ್ಯ ಓದುವುದೇ ಪುಣ್ಯದ ಕೆಲಸ’ ಎಂದು ತಹಶೀಲ್ದಾರ್ ಪಟ್ಟರಾಜ ಗೌಡ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ, ಪಟ್ಟಣ ಪಂಚಾಯ್ತಿ ಹಾಗೂ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವಮಾನವ ದಿನಾಚರಣೆ (ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ)ಯಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಎಪಿಎಂಸಿ ಅಧ್ಯಕ್ಷ ಕೆ.ಜಿ.ನಾಗರಾಜ ಮಾತನಾಡಿದರು. ರೇಷ್ಮೆ ಇಲಾಖೆಯ ಅಧಿಕಾರಿ ಎಸ್.ಯು.ಹೆಗಡೆ ಕುವೆಂಪು ಅವರ ಬಗ್ಗೆ ಉಪನ್ಯಾಸ ನೀಡಿದರು. ತಾಲ್ಲೂಕು ಗ್ರಾಮ ಪಂಚಾಯ್ತಿ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ವೀರಭದ್ರ ನಾಯ್ಕ, ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್, ತಾಲ್ಲೂಕು ಪಂಚಾಯ್ತಿ ಇಒ ಶ್ರೀಧರ ಭಟ್ ಇದ್ದರು.

ಬಾಲಿಕೊಪ್ಪ ಶಾಲೆಯ ವಿದ್ಯಾರ್ಥಿನಿ ಯರು ಪ್ರಾರ್ಥನಾ ಗೀತೆ ಹಾಗೂ ನಾಡಗೀತೆ ಹಾಡಿದರು. ಶಿರಸ್ತೇದಾರ ಡಿ.ಆರ್.ಬೆಳ್ಳಿಮನೆ ಸ್ವಾಗತಿಸಿದರು. ಗ್ರಾಮ ಲೆಕ್ಕಾಧಿಕಾರಿ ಹರೀಶ ನಾಯ್ಕ ನಿರೂಪಿಸಿದರು.

‘ಸಹಬಾಳ್ವೆ ಸಂದೇಶ’

ಕುಮಟಾ: ‘ಕುವೆಂಪು ಅವರ ಎಲ್ಲ ಸಾಹಿತ್ಯ ಪ್ರಕಾರಗಳಲ್ಲೂ ಮಾನವೀಯ ಮೌಲ್ಯ ಹಾಗೂ ಸಹಬಾಳ್ವೆಯ ಸಂದೇಶ ಎದ್ದು ಕಾಣುತ್ತದೆ’ ಎಂದು ಉಪನ್ಯಾಸಕ ಆನಂದು ನಾಯ್ಕ ಹೇಳಿದರು.

ಕುಮಟಾದಲ್ಲಿ ಶುಕ್ರವಾರ ನಡೆದ ವಿಶ್ವಮಾನವ ರಾಷ್ಟ್ರ ಕವಿ ಕುವೆಂಪು ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು. ಉಪವಿಭಾಗಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಹಶೀಲ್ದಾರ್ ಮೇಘರಾಜ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಆರ್.ಎಸ್. ಶಾನಭಾಗ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಜಿಲ್ಲೆಯಲ್ಲಿ ಈ ಬಾರಿ ಪಕ್ಷಾಧಾರಿತ ಚುನಾವಣೆ

ಕಾರವಾರ
ಜಿಲ್ಲೆಯಲ್ಲಿ ಈ ಬಾರಿ ಪಕ್ಷಾಧಾರಿತ ಚುನಾವಣೆ

25 Apr, 2018

ಕುಮಟಾ
ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಬಂಡಾಯದ ಕಹಳೆ

ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಮಂಗಳವಾರ ಎರಡು ರಾಷ್ಟ್ರೀಯ ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಗಮನ ಸಳೆದರು.

25 Apr, 2018
62 ಅಭ್ಯರ್ಥಿಗಳಿಂದ ಉಮೇದುವಾರಿಕೆ ಸಲ್ಲಿಕೆ

ಕಾರವಾರ
62 ಅಭ್ಯರ್ಥಿಗಳಿಂದ ಉಮೇದುವಾರಿಕೆ ಸಲ್ಲಿಕೆ

25 Apr, 2018

ಕಾರವಾರ
ಒಂದೇ ದಿನ ಐವರಿಂದ ನಾಮಪತ್ರ ಸಲ್ಲಿಕೆ

ವಿಧಾನಸಭೆ ಚುನಾವಣೆಗೆ ಕಾರವಾರ– ಅಂಕೋಲಾ ಕ್ಷೇತ್ರದಿಂದ ಸೋಮವಾರ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಎಲ್ಲ ಅಭ್ಯರ್ಥಿಗಳೂ ಈ...

24 Apr, 2018

ಮುಂಡಗೋಡ
ಬಿಸಿಲ ಝಳಕ್ಕೆ ಹೈರಾಣಾದ ಅಭ್ಯರ್ಥಿಗಳು

ಚುನಾವಣೆಯ ಕಾವು ಅಷ್ಟಾಗಿ ಕಾಣದಿದ್ದರೂ ಬಂಡಾಯದ ಬಿಸಿ ಹಾಗೂ ಬಿಸಿಲಿನ ಝಳ ಅಭ್ಯರ್ಥಿಗಳಿಗೆ ತಲೆನೋವಾಗಿದೆ.

24 Apr, 2018