ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಒಂದುವರೆ ವರ್ಷದಲ್ಲಿ ₹ 200 ಕೋಟಿ ಅನುದಾನ’

Last Updated 30 ಡಿಸೆಂಬರ್ 2017, 9:14 IST
ಅಕ್ಷರ ಗಾತ್ರ

ವಿರಾಜಪೇಟೆ: ಕಾಂಗ್ರೆಸ್ ಸರ್ಕಾರ ಒಂದುವರೆ ವರ್ಷದಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಒಟ್ಟು ₹ 200 ಕೋಟಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ ಹೇಳಿದರು.

₹ 10 ಲಕ್ಷ ವೆಚ್ಚದಲ್ಲಿ ಸಮೀಪದ ಅಂಬಟ್ಟಿಯ ಮುಖ್ಯ ರಸ್ತೆಯಿಂದ ಮಗ್ಗುಲ ಗ್ರಾಮಕ್ಕೆ ಹೋಗುವ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ರಸ್ತೆ ಕಾಮಗಾರಿಗಾಗಿ ಮತ್ತಷ್ಟು ಅನುದಾನ ನೀಡಲಾಗುವುದು. ತಲಕಾವೇರಿ– ಬಾಗಮಂಡಲ ರಸ್ತೆ ಅಭಿವೃದ್ಧಿಗಾಗಿ ₹ 20 ರಿಂದ 25 ಕೋಟಿ ಅನುದಾನ ದೊರೆಯಲಿದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಬಿಟ್ಟಂಗಾಲ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ₹ 84 ಲಕ್ಷ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು.

ಪಕ್ಷದ ವಲಯ ಅಧ್ಯಕ್ಷ ಕಂಜಿತಂಡ ಗಿಣಿ, ಮುಖಂಡರಾದ ಪಿ.ಎ.ಹನೀಫ್‌, ಎಂ.ಬೆಲ್ಲು ಬೋಪಯ್ಯ, ಗ್ರಾ.ಪಂ. ಸದಸ್ಯ ಬಿ.ಆರ್.ದಿನೇಶ್, ಕೆ.ಪಿ.ಸಾದಲಿ, ಗ್ರಾಮಸ್ಥರಾದ ಅಟ್ರಂಗಡ ವಿಶ್ವನಾಥ್, ಚೋಕಂಡ ರಮೇಶ್ ಉ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT