ವಾರೆಗಣ್ಣು

ಸಚಿವರು ಮೂಗಿಗೆ ತುಪ್ಪ ಸವರುತ್ತಿದ್ದಾರೆ

‘ಎರಡು ತಿಂಗಳಿಗೊಮ್ಮೆ ಜಿಲ್ಲೆಗೆ ಬಂದು ಹೋಗುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್‌ ಅವರು ಜನರ ಮೂಗಿಗೆ ತುಪ್ಪ ಸವರಿ ಹೋಗುತ್ತಿದ್ದಾರೆ. ಜನರು ನೀಡಿದ ದೂರುಗಳಿಗೆ ಸ್ಪಂದಿಸುತ್ತಿಲ್ಲ’ ಎಂದು ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎನ್. ಮಹಾವೀರ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ರಾಯಚೂರು: ‘ಎರಡು ತಿಂಗಳಿಗೊಮ್ಮೆ ಜಿಲ್ಲೆಗೆ ಬಂದು ಹೋಗುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್‌ ಅವರು ಜನರ ಮೂಗಿಗೆ ತುಪ್ಪ ಸವರಿ ಹೋಗುತ್ತಿದ್ದಾರೆ. ಜನರು ನೀಡಿದ ದೂರುಗಳಿಗೆ ಸ್ಪಂದಿಸುತ್ತಿಲ್ಲ’ ಎಂದು ರಾಯಚೂರು ನಗರ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎನ್. ಮಹಾವೀರ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಸಚಿವರು ಬಂದಾಗೊಮ್ಮೆ ಮನವಿ ಕೊಡುವುದಕ್ಕೆ ನಮ್ಮ ಸಂಘದವರು ನಿಂತುಕೊಳ್ಳುತ್ತೇವೆ. ಸಚಿವರು ದೂರದಿಂದಲೇ ನನ್ನ ಹೆಸರು ಕೂಗಿ ಮಾತನಾಡಿಸುತ್ತಾರೆ. ಇದರಿಂದ, ಸಚಿವರು ಮತ್ತು ಮಹಾವೀರ ನಡುವೆ ಒಳಗೊಳಗೆ ಒಳ್ಳೆಯ ಸಂಬಂಧ ಇದೆ ಎಂದು ನೆರೆದ ಜನರು ತಿಳಿದುಕೊಳ್ಳುತ್ತಿದ್ದಾರೆ’ ಎಂದರು.

ಮಾರುಕಟ್ಟೆ ಅಭಿವೃದ್ಧಿ ಮಾಡಿ ವ್ಯಾಪಾರಿಗಳಿಗೆ, ರೈತರಿಗೆ ಅನುಕೂಲ ಮಾಡಿಕೊಡಿ ಎಂದು ಕೇಳುತ್ತಿದ್ದೇವೆ. ಆದರೆ ಜನರ ಮುಂದೆಯೇ ನನ್ನ ಮೂಗಿಗೆ ತುಪ್ಪ ಹಚ್ಚಿ ಹೋಗುತ್ತಿದ್ದಾರೆಯೇ ವಿನಾ ಕೆಲಸ ಮಾಡುತ್ತಿಲ್ಲ. ದೂರದ ಮೈಸೂರಿನವರಿಗೆ ಈ ಜಿಲ್ಲೆಯ ಉಸ್ತುವಾರಿ ಕೊಡಬೇಡಿ ಎಂದು ಆರಂಭದಲ್ಲೇ ಜನರು ವಿರೋಧ ಮಾಡಿದ್ದರು. ಸರ್ಕಾರ ಜನರ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ ಎಂದು ಅಳಲು ಹೇಳಿಕೊಂಡಿದ್ದು ಎಲ್ಲರ ಗಮನ ಸೆಳೆಯಿತು.

–ನಾಗರಾಜ ಚಿನಗುಂಡಿ

Comments
ಈ ವಿಭಾಗದಿಂದ ಇನ್ನಷ್ಟು
ಫುಟ್‌ಬಾಲ್ ಅಂಗಳದ ಮಿನುಗುತಾರೆ

ವ್ಯಕ್ತಿ
ಫುಟ್‌ಬಾಲ್ ಅಂಗಳದ ಮಿನುಗುತಾರೆ

18 Mar, 2018
 ‘ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಯಲಿ’

ವಾರದ ಸಂದರ್ಶನ
‘ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಯಲಿ’

18 Mar, 2018
ಬುದ್ಧನ ಕಥೆಗೆ ಬಗ್ಗಿದ ವೈದ್ಯ!

ಕಟಕಟೆ–110
ಬುದ್ಧನ ಕಥೆಗೆ ಬಗ್ಗಿದ ವೈದ್ಯ!

18 Mar, 2018

ವಿಜಯಪುರ
‘ನೀನೇನು ಎಲೆಕ್ಷನ್‌ಗೆ ನಿಲ್ತಿಯೇನಪ್ಪಾ..!’

‘ನೋಡಪ್ಪಾ ನೀ ಎಲೆಕ್ಷನ್‌ಗೆ ನಿಲ್ಲೋದಿದ್ರೇ ಹೇಳು. ಸುಮ್ನೇ ಯಾಕ ಕಾರ್ಪೊರೇಟರ್ ಆಗಾಕ ಬಡಿದಾಡ್ತಿ. ನಮ್‌ ಸದಸ್ಯರನ್ನೆಲ್ಲಾ ಒಪ್ಸಿ, ನಿನ್ನೇ ಸಿಟಿಗೆ ಎಂಎಲ್‌ಎ ಎಲೆಕ್ಷನ್‌ಗೆ ನಿಲ್ಲಸ್ತೀನಿ...’ ...

18 Mar, 2018

ಈ ಭಾನುವಾರ
ಬಟ್ಟೆ ಧರಿಸದಿದ್ದರೆ ಮಾನ ಹೋಗೋದು!

‘ಬೆಂಗಳೂರಿನ ಮಾನ ಹೋದ ಮೇಲೆ ಇನ್ನೊಂದು ವರದಿ ಕೊಟ್ಟರೆ ಜನರು ನಂಬ್ತಾರಾ’ ಎಂದು ಪತ್ರಕರ್ತರು ಮರು ಪ್ರಶ್ನಿಸಿದಾಗ, ‘ಅಯ್ಯೊ ಮಾನ ಹೇಗೆ ಹೋಗುತ್ತೆ. ನಾವು...

18 Mar, 2018