ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಕಾರಿ ಬೀಜಗಳ ವಿತರಣೆಗೆ ಕ್ರಮ

Last Updated 31 ಡಿಸೆಂಬರ್ 2017, 5:24 IST
ಅಕ್ಷರ ಗಾತ್ರ

ಬೆಳಗಾವಿ: ತೋಟಗಾರಿಕೆ ಇಲಾಖೆಯು ಕೃಷಿಭಾಗ್ಯ ಯೋಜನೆಯಡಿ ಸಣ್ಣ, ಅತಿಸಣ್ಣ ನೀರಾವರಿ ಸೌಲಭ್ಯ ಹೊಂದಿರುವ ಅರ್ಹ ರೈತರಿಗೆ ಗರಿಷ್ಠ 1 ಎಕರೆ ಪ್ರದೇಶದವರೆಗೆ ₹ 2,000 ಮೌಲ್ಯದ ತರಕಾರಿ ಬೀಜ ಕಿಟ್ ಶೇ 100ರ ಸಹಾಯಧನದಲ್ಲಿ ವಿತರಿಸಲಾಗುತ್ತಿದೆ.

ಆಸಕ್ತ ರೈತರು ತಾಲ್ಲೂಕು ತೋಟಗಾರಿಕಾ ಕಚೇರಿಗೆ ಅಗತ್ಯ ದಾಖಲಾತಿಗಳನ್ನು ಒದಗಿಸಿ ಸೌಲಭ್ಯವನ್ನು ಪಡೆಯಬೇಕು. ಮೊದಲ ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾಖಲಾತಿ ನೀಡಲು ಜ.8 ಕೊನೆಯ ದಿನ

ಬೆಳಗಾವಿ: ನೇಕಾರರ ಸಹಕಾರಿ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು, ಪಟ್ಟಣ ಸಹಕಾರಿ ಬ್ಯಾಂಕುಗಳು, ಕೃಷಿಯೇತರ ಪತ್ತಿನ ಸಹಕಾರ ಸಂಘಗಳಿಂದ ₹50,000ವರೆಗ ಪಡೆದ ನೇಕಾರರ ಸಾಲವನ್ನು ಮನ್ನಾಗೊಳಿಸಲಾಗುತ್ತಿದ್ದು, ಸಾಲಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜನವರಿ 8ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ದೂರವಾಣಿ ಸಂಖ್ಯೆ 0831–2407237 ಮತ್ತು 0831– 2443246 ಸಂಪರ್ಕಿಸಬೇಕೆಂದು ಪ್ರಕಟಣೆ ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT