ಶಹಾಪುರ

ಜ.6ರಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ಅಧ್ಯಕ್ಷ ಹುದ್ದೆಯು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಿದ್ದರೆ, ಉಪಾಧ್ಯಕ್ಷ ಹುದ್ದೆಯು ಸಾಮಾನ್ಯ ವರ್ಗಕ್ಕೆ ಮೀಸಲಿದೆ. ಅಂದು ಬೆಳಿಗ್ಗೆ ನಾಮಪತ್ರ ಸಲ್ಲಿಸುವುದು. ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಆಯ್ಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಜ.6ರಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ಶಹಾಪುರ: ನಗರಸಭೆಯ 8ನೇ ಅವಧಿಗಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಜ.6ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣೆ ಅಧಿಕಾರಿಯಾಗಿರುವ ಉಪ ವಿಭಾಗಾಧಿಕಾರಿ ಡಾ.ಕೆ.ಜಿ. ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷ ಹುದ್ದೆಯು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಿದ್ದರೆ, ಉಪಾಧ್ಯಕ್ಷ ಹುದ್ದೆಯು ಸಾಮಾನ್ಯ ವರ್ಗಕ್ಕೆ ಮೀಸಲಿದೆ. ಅಂದು ಬೆಳಿಗ್ಗೆ ನಾಮಪತ್ರ ಸಲ್ಲಿಸುವುದು. ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಆಯ್ಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ನಗರಸಭೆಯ ಒಟ್ಟು 23 ಸ್ಥಾನಗಳಲ್ಲಿ ಕಾಂಗ್ರೆಸ್ 16, ಕೆಜೆಪಿ 6, ಜೆಡಿಎಸ್ 1 ಸದಸ್ಯರಿದ್ದಾರೆ.

ಏಕೈಕ ಸದಸ್ಯೆ: ಅಧ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿದ್ದು, ಅದರಲ್ಲಿ 22ನೇ ವಾರ್ಡ್‌ನ ಕಾಂತಮ್ಮ ಹಣಮಂತರಾಯ ಏಕೈಕ ಸದಸ್ಯರಾಗಿದ್ದಾರೆ. ನಿರೀಕ್ಷೆಯಂತೆ ಕಾಂತಮ್ಮ ಅಧ್ಯಕ್ಷೆಯಾಗಲಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ತೆರೆಮರೆಯ ಕಸರತ್ತು ಶುರುವಾಗಿದೆ.

ರಿಟ್ ಅರ್ಜಿ: ‘ಚಿಕ್ಕಬಳ್ಳಾಪುರದ ನಗರಸಭೆಯ ಸದಸ್ಯರೊಬ್ಬರು ಅಧ್ಯಕ್ಷರ ಹುದ್ದೆಯ ಮೀಸಲಾತಿ ಪ್ರಶ್ನಿಸಿ ಬೆಂಗಳೂರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದರಿಂದ 2016 ಸೆಪ್ಟೆಂಬರ್‌ 12ರಿಂದ ಜಿಲ್ಲಾಧಿಕಾರಿಯು ನಗರಸಭೆಯ ಆಡಳಿತಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯಾರ್ಥಗೊಂಡಿದ್ದರಿಂದ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ’ ಎಂದು ನಗರಸಭೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
***
ವರ್ಗಾವಣೆ

ಕಳೆದ ಐದು ತಿಂಗಳ ಹಿಂದೆ ನಗರಸಭೆಯ ಪೌರಾಯುಕ್ತರಾಗಿ ಬಂದಿದ್ದ ರಮೇಶ ನಾಯಕ ಅವರು ರಾಯಚೂರು ನಗರಸಭೆಗೆ ಪೌರಾಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.

 

Comments
ಈ ವಿಭಾಗದಿಂದ ಇನ್ನಷ್ಟು
ಎಡದಂಡೆ ಮುಖ್ಯ ಕಾಲುವೆ ಕುಸಿತ

ಹುಣಸಗಿ
ಎಡದಂಡೆ ಮುಖ್ಯ ಕಾಲುವೆ ಕುಸಿತ

22 Jan, 2018

ಕಕ್ಕೇರಾ
ಜಾತ್ರೆ: ಗಮನಸೆಳೆದ ಕುದುರೆಗಳ ಕುಣಿತ

ದೇವಸ್ಥಾನ ಆವರಣ, ರಥದ ಮಾರ್ಗ, ಚೌಡಯ್ಯ ವೃತ್ತದ ಮೂಲಕ ದೇವಸ್ಥಾನ ತಲುಪಿದವು. ಚಿದಾನಂದ ನಡಗೇರಿ ಸಂಗಡಿಗರ ಹಲಗೆ ತಾಳಕ್ಕೆ ಕುದುರೆಗಳ ಕುಣಿತ ಗಂಟೆ ನಡೆಯಿತು. ...

22 Jan, 2018
ಕರಾಟೆಗೆ ಜೀವನ ಮೀಸಲಿಟ್ಟ ಪಾಷಾ

ಸುರಪುರ
ಕರಾಟೆಗೆ ಜೀವನ ಮೀಸಲಿಟ್ಟ ಪಾಷಾ

21 Jan, 2018
ಗುಡುಗಿದ ಮಹಿಳೆಯರು: ಸಭೆ ಮೊಟಕು

ಯಾದಗಿರಿ
ಗುಡುಗಿದ ಮಹಿಳೆಯರು: ಸಭೆ ಮೊಟಕು

20 Jan, 2018
ವೈಭವದ ಸೋಮನಾಥ ದೇವರ ಉಚ್ಛಾಯಿ

ಕಕ್ಕೇರಾ
ವೈಭವದ ಸೋಮನಾಥ ದೇವರ ಉಚ್ಛಾಯಿ

19 Jan, 2018