ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಐವಿ ಪೀಡಿತರನ್ನು ಶೋಷಿಸಿದರೆ ಶಿಕ್ಷೆ

Last Updated 31 ಡಿಸೆಂಬರ್ 2017, 11:29 IST
ಅಕ್ಷರ ಗಾತ್ರ

ಕೋಲಾರ: ‘ಎಚ್‍ಐವಿ ಪೀಡಿತರನ್ನು ಟೀಕಿಸುವುದು ಅಥವಾ ಶೋಷಣೆ ಮಾಡುವುದು ಕಂಡುಬಂದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ನೀಡಿದರೆ ಅಂತಹವರನ್ನು ಶಿಕ್ಷೆಗೆ ಒಳ ಪಡಿಸಲಾಗುವುದು’ ಎಂದು ನ್ಯಾಯಾಧೀಶ ಗುರುರಾಜ್ ಜಿ.ಶಿರೋಳ ತಿಳಿಸಿದರು.

ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಲ್ಲಿ ಶನಿವಾರ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಎಚ್ಐವಿ ಬಾಧಿತರಿಗಾಗಿ ಹಮ್ಮಿಕೊಂಡಿದ್ದ ಕಾನೂನು ಸೇವೆಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಏಡ್ಸ್ ಬಾಧಿತರು ದೈಹಿಕ, ಮಾನಸಿಕ ಜೀವನ ಸಾಗಿಸುವುದು ಅವಶ್ಯವಾಗಿದೆ. ಯಾವುದೇ ವ್ಯಕ್ತಿ ಉದ್ದೇಶಕಪೂರ್ವಕವಾಗಿ ಈ ಸೋಂಕಿಗೆ ಬಲಿವಾಗುವುದಿಲ್ಲ. ಕೆಲ ಆಚಾತುರ್ಯ್ಯಗಳಿಂದ ಸೋಂಕಿಗೆ ಬಲಿಯಾಗುತ್ತಾರೆ. ಎಂದು
ಹೇಳಿದರು.

‘ಎಚ್ಐವಿ ಸೋಂಕಿತರಿಗೆ ಮಾನಸಿಕವಾಗಿ ಧೈರ್ಯವನ್ನು ತುಂಬಬೇಕು’ ಎಂದು ಜಾಗೃತಿ ಸೇವಾ ಸಂಸ್ಥೆಯ ಅಧ್ಯಕ್ಷ ಕೆ.ಆರ್.ಧನರಾಜ್ ತಿಳಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಜಗದೀಶ್ ಮಾತನಾಡಿ, ‘ಜಿಲ್ಲಾ ಆಸ್ಪತ್ರೆಯಲ್ಲಿ ಎಚ್ಐವಿ ಸೋಂಕಿತರಿಗೆ ಪರಿಣಾಮಕಾರಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಏಡ್ಸ್ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಈ ಸೋಂಕನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪ್ರಸನ್ನ ಹಾಜರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT