ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತುಂಗದಲ್ಲಿ ಮ್ಯೂಚುವಲ್‌ ಫಂಡ್‌ ಉದ್ಯಮ

Last Updated 31 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಮ್ಯೂಚುವಲ್‌ ಫಂಡ್‌ ಉದ್ಯಮವು ಪ್ರಗತಿಯ ಉತ್ತುಂಗದಲ್ಲಿದ್ದು, 2017ರಲ್ಲಿ ಷೇರುಪೇಟೆಯಲ್ಲಿ ₹ 1 ಲಕ್ಷ ಕೋಟಿ ಹೂಡಿಕೆ ಮಾಡಲಾಗಿದೆ. ಹೊಸ ವರ್ಷದಲ್ಲಿ ಹೂಡಿಕೆ ಪ್ರಮಾಣ ಹೆಚ್ಚಾಗಲಿದ್ದು, ಉತ್ತಮ ಲಾಭ ತಂದುಕೊಡುವ ನಿರೀಕ್ಷೆ ವ್ಯಕ್ತವಾಗಿದೆ.

2016ರಲ್ಲಿ ಮ್ಯೂಚುವಲ್ ಫಂಡ್‌ ಸಂಸ್ಥೆಗಳು ಷೇರುಪೇಟೆಯಲ್ಲಿ  ₹ 48,000 ಕೋಟಿ ಹೂಡಿಕೆ ಮಾಡಿದ್ದವು. ಅದಕ್ಕೆ ಹೋಲಿಸಿದರೆ ಹೂಡಿಕೆ ಮೊತ್ತ ಎರಡರಷ್ಟು ಹೆಚ್ಚಾಗಿದೆ ಎಂದು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಮಾಹಿತಿ ನೀಡಿದೆ. ಚಿಲ್ಲರೆ ಹೂಡಿಕೆದಾರರ ಭಾಗ
ವಹಿಸುವಿಕೆ ಹೆಚ್ಚಾಗುತ್ತಿದೆ. ಇದರಿಂದ ಹೂಡಿಕೆ ಪ್ರಮಾಣದಲ್ಲಿಯೂ ಏರಿಕೆ ಕಂಡುಬಂದಿದೆ ಎಂದು ತಜ್ಞರು ಹೇಳಿದ್ದಾರೆ.

‘2017ರಲ್ಲಿ ಹೂಡಿಕೆ ಆಯ್ಕೆಯಲ್ಲಿ ಬದಲಾವಣೆ ಕಂಡುಬಂದಿದೆ. ರಿಯಲ್‌ ಎಸ್ಟೇಟ್, ಚಿನ್ನದ ಮೇಲೆ ಹೂಡಿಕೆ ಮಾಡುವುದಕ್ಕೆ ಬದಲಾಗಿ ಮ್ಯೂಚುವಲ್ ಫಂಡ್‌, ಷೇರುಪೇಟೆಗಳಲ್ಲಿ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಹೂಡಿಕೆ ಮನೋಭಾವ ಇರಲಿದೆ’ ಎಂದು ಕೋಟಕ್‌ ಮ್ಯೂಚುವಲ್ ಫಂಡ್‌ನ ಸಿಐಒ ಹರ್ಷ ಉಪಾಧ್ಯಾಯ ತಿಳಿಸಿದ್ದಾರೆ.

‘ಮ್ಯೂಚುವಲ್ ಫಂಡ್‌ನಿಂದ ಬರುತ್ತಿರುವ ಗಳಿಕೆ ಸ್ಥಿರವಾಗಿದೆ. ಗಂಡಾಂತರ ನಿರ್ವಹಣೆಗೆ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ಸುರಕ್ಷಿತ ಹೂಡಿಕೆಯ ಕುರಿತ ಜಾಗೃತಿ ಕಾರ್ಯಕ್ರಮಗಳೂ ಜನಪ್ರಿಯತೆಯನ್ನು ಹೆಚ್ಚಿಸುತ್ತಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT