ಸಿರುಗುಪ್ಪ

ಪರಿವರ್ತನಾ ರ‍್ಯಾಲಿ: ಸಿದ್ಧತೆಗಳ ಪರಿಶೀಲನೆ

ಜನವರಿ 5ರಂದು ಬಿಜೆಪಿ ಪರಿವರ್ತನಾ ರ‍್ಯಾಲಿ ಹಾಗೂ ಬಹಿರಂಗ ಸಭೆ ಹಿನ್ನಲೆಯಲ್ಲಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿನ ಸಿದ್ಧತೆಗಳನ್ನು ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಶಂಕ್ರಪ್ಪ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿರುಗುಪ್ಪದಲ್ಲಿ ಬಿಜೆಪಿ ಪಕ್ಷದ ಪರಿವರ್ತನಾ ರ್‌್ಯಾಲಿ ಹಾಗೂ ಬಹಿರಂಗ ಸಭೆ ನಡೆಯುವ ತಾಲ್ಲೂಕು ಕ್ರೀಡಾಂಗಣದಲ್ಲಿನ ಸಿದ್ದತೆಗಳನ್ನು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಶಂಕ್ರಪ್ಪ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಸಿರುಗುಪ್ಪ: ಜನವರಿ 5ರಂದು ಬಿಜೆಪಿ ಪರಿವರ್ತನಾ ರ‍್ಯಾಲಿ ಹಾಗೂ ಬಹಿರಂಗ ಸಭೆ ಹಿನ್ನಲೆಯಲ್ಲಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿನ ಸಿದ್ಧತೆಗಳನ್ನು ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಶಂಕ್ರಪ್ಪ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಯಡಿಯೂರಪ್ಪ ಅವರು ಮಾನವೀಯ ದೃಷ್ಟಿಯಿಂದ ಮಹದಾಯಿ ಸಮಸ್ಯೆ ಇತ್ಯರ್ಥಗೊಳಿಸಲು ಮುಂದಾಗಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಕುತಂತ್ರದಿಂದ ಬೆಂಗಳೂರಿನ ಪಕ್ಷದ ಕಚೇರಿ ಮುಂದೆ ಹೋರಾಟಗಾರರು ಪ್ರತಿಭಟನೆ ಮಾಡುವಂತಾಯಿತು’ ಎಂದು ಆರೋಪಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರೊಂದಿಗೆ ಗೋವಾದ ವಿರೋಧಪಕ್ಷ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿ ನೀರು ಬಿಡಿಸುವಂತೆ ಮಾಡಬೇಕು’ ಎಂದು ಆಗ್ರಹಿಸಿದರು.

ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿ, ‘ ರ್‌್ಯಾಲಿಯಲ್ಲಿ 40 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. 15ಸಾವಿರ ಆಸನಗಳ ಹಾಗೂ ಕುಡಿಯುವ ನೀರು, ಉಪಹಾರ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ರಾಜ್ಯ ಕಾರ್ಯದರ್ಶಿ ತುಕರಾಂಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಾರಿಗೌಡ, ಜಿ.ಪಂ.ಸದಸ್ಯರಾದ, ರತ್ನಮ್ಮ ಅಡಿವೆಯ್ಯಸ್ವಾಮಿ, ಕೋಟೇಶ್ವರೆಡ್ಡಿ, ಬಿ.ಜಿ.ರವಿ, ರಾಜ್ಯ ಪರಿಷತ್ ಸದಸ್ಯ ಶಂಕರರೆಡ್ಡಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೊಂಚಿಗೇರಿ ನಾಗರಾಜಗೌಡ, ಬಸವರಾಜ, ಪ್ರೇಮಕುಂದರಗಿ, ಮಂಜುಳಾ, ಅಲಮೇಲಮ್ಮ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು

ಕಂಪ್ಲಿ
ಸಂಭ್ರಮದ ವಾಸವಿ ಜಯಂತ್ಯುತ್ಸವ

ಕಂಪ್ಲಿಯಲ್ಲಿ ವಾಸವಿ ಕಲ್ಯಾಣಮಂಟಪದಲ್ಲಿ ಬುಧವಾರ ವಾಸವಿ ಜಯಂತ್ಯುತ್ಸವ  ನಡೆಯಿತು.

26 Apr, 2018

ಬಳ್ಳಾರಿ
ಬಳ್ಳಾರಿ ಹೊರಗಿದ್ದೇ ಜಿಲ್ಲೆಯ ಮುಖಂಡರೊಂದಿಗೆ ಜನಾರ್ದನರೆಡ್ಡಿ ಸಭೆ!

ಬಳ್ಳಾರಿ ಜಿಲ್ಲೆಯ ಬಿಜೆಪಿ ಚುನಾವಣಾ ರಾಜಕೀಯ ಮೊಳಕಾಲ್ಮುರು ಗಡಿಭಾಗಕ್ಕೆ ಸ್ಥಳಾಂತರಗೊಂಡಿದೆ.ಜಿಲ್ಲೆ ಪ್ರವೇಶಿಸುವುದಕ್ಕೆ ಅನುಮತಿ ಇಲ್ಲವಾದ್ದರಿಂದ ಬಳ್ಳಾರಿ ಮತ್ತು ಮೊಳಕಾಲ್ಮುರು ಗಡಿಭಾಗದಲ್ಲಿ ವಾಸ್ತವ್ಯ ಹೂಡಿರುವ ಜಿ.ಜನಾರ್ದನ...

26 Apr, 2018
ತಾಯಣ್ಣ ಮಗನಿಗೆ ಜೆಡಿಎಸ್‌ ಟಿಕೆಟ್‌!

ಬಳ್ಳಾರಿ
ತಾಯಣ್ಣ ಮಗನಿಗೆ ಜೆಡಿಎಸ್‌ ಟಿಕೆಟ್‌!

25 Apr, 2018

ಹೂವಿನಹಡಗಲಿ
ಓದೋ ಗಂಗಪ್ಪ ಹೊತ್ತು ಬಂದ ಬೆಂಬಲಿಗರು

ಹಡಗಲಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಓದೋ ಗಂಗಪ್ಪ ಮಂಗಳವಾರ ನಾಮಪತ್ರ ಸಲ್ಲಿಸಿದರು.

25 Apr, 2018

ಕಂಪ್ಲಿ
ಮೀನುಗಾರರಿಂದ ಕಠಿಣ ಹರಕೆ ಸಮರ್ಪಣೆ

ಕಂಪ್ಲಿ ಕೋಟೆ ತುಂಗಭದ್ರಾದೇವಿ ಮೀನುಗಾರರ ಕಾಲೊನಿ ಕಾಳಮ್ಮದೇವಿ ಗಂಗಾಸ್ಥಳ ಪೂಜಾ ಮಹೋತ್ಸವದ ಅಂಗವಾಗಿ ಮಂಗಳವಾರ ಮೀನುಗಾರರು ವಿಶಿಷ್ಟ ಹರಕೆಗಳನ್ನು ಭಕ್ತಿ ಭಾವದಿಂದ ತೀರಿಸಿದರು.

25 Apr, 2018