ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೃಂಗೇರಿ ಕ್ಷೇತ್ರ: 367 ಮನೆ ಮಂಜೂರು’

Last Updated 1 ಜನವರಿ 2018, 6:47 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಎನ್‌.ಆರ್.ಪುರ, ಕೊಪ್ಪ, ಶೃಂಗೇರಿ ತಾಲ್ಲೂಕಿನ ವ್ಯಾಪ್ತಿಗೆ ಒಟ್ಟು 367 ಮನೆಗಳು ಮಂಜೂರಾಗಿವೆ ಎಂದು ರಾಜ್ಯ ಅನಿ ವಾಸಿ ಭಾರತೀಯ ನಿಗಮದ ಉಪಾ ಧ್ಯಕ್ಷೆ ಡಾ.ಆರತಿಕೃಷ್ಣ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಶೃಂಗೇರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡಾಗ ಸರ್ಕಾರದಿಂದ ವಸತಿ ಮಂಜೂರು ಮಾಡಿಸಿಕೊಡಬೇಕೆಂದು ವಸತಿ ರಹಿತರು ಮನವಿ ಸಲ್ಲಿಸಿದ್ದರು. ಅದರಂತೆ ವಸತಿ ಸಚಿವ ಕೃಷ್ಣಪ್ಪ ಅವರನ್ನು ಭೇಟಿ ಮಾಡಿ ಶೃಂಗೇರಿ ಕ್ಷೇತ್ರದ ವ್ಯಾಪ್ತಿಗೆ ಬರುವ 3 ತಾಲ್ಲೂಕುಗಳಿಗೆ ಹೆಚ್ಚುವರಿ ಮನೆಗಳನ್ನು ಮಂಜೂರು ಮಾಡಬೇಕೆಂದು ಮನವಿ ಸಲ್ಲಿಸಲಾಗಿತ್ತು’ ಎಂದರು.

‘ನನ್ನ ಮನವಿಗೆ ಸ್ಪಂದಿಸಿದ ಶೃಂಗೇರಿ, ನರಸಿಂಹರಾಜಪುರ ಮತ್ತು ಕೊಪ್ಪ ತಾಲ್ಲೂಕುಗಳ ವ್ಯಾಪ್ತಿಗೆ ಬರುವ ಪಂಚಾ ಯಿತಿಗಳಿಗೆ ಹೆಚ್ಚುವರಿಯಾಗಿ ತಮ್ಮ ವಿವೇಚನ ಕೋಟಾದಡಿ ಸಾಮಾನ್ಯ ವರ್ಗದವರಿಗೆ 300 ಮನೆಗಳನ್ನು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 67 ಮನೆಗಳನ್ನು ಮಂಜೂರು ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT