ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ ಮುಕ್ತ ರಾಜ್ಯಕ್ಕೆ ಸಹಕರಿಸಿ’

Last Updated 2 ಜನವರಿ 2018, 7:12 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯವನ್ನು ಕಾಂಗ್ರೆಸ್ ಮುಕ್ತವಾಗಿ ಮಾಡಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಎಸ್.ಸಿ.ಘಟಕದ ಕಾರ್ಯದರ್ಶಿ ಕೆ.ನಾಗೇಶ್ ಹೇಳಿದರು. ಇಲ್ಲಿನ ನಗರೇಶ್ವರ ಸಮುದಾಯ ಭವನದಲ್ಲಿ ಭಾನುವಾರ ನಗರ ಬಿಜೆಪಿ ಘಟಕದಿಂದ ಆಯೋಜಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ 93 ನೇ ವರ್ಷದ ಜನ್ಮದಿನದ ಅಂಗವಾಗಿ ನಾಗರಿಕರಿಗೆ ನೀರಿನ ಕ್ಯಾನುಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರದ ಜನಪರ ಯೋಜನೆಗಳ ಪರಿಣಾಮವಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 2018ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ 67 ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್‌ ಸಾಧಿಸಲು ಸಾಧ್ಯವಾಗದ ಪ್ರಗತಿಯನ್ನು, ಕೇವಲ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧಿಸಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಜನಪರವಾದ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಮಾಹಿತಿ ನೀಡುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು. ಬಿಜೆಪಿ ಮುಖಂಡ ಡಿ.ಆರ್.ನಾರಾಯಣಸ್ವಾಮಿ ಮಾತನಾಡಿ, ಯುಪಿಎ ಆಡಳಿತಾವಧಿಯಲ್ಲಿ ಸಾಲು ಸಾಲು ಹಗರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದ ಅನೇಕ ಸಚಿವರು ಜೈಲಿಗೆ ಹೋಗಿ ಬಂದಿದ್ದರು ಎಂದರು.

ಮೋದಿ ನೇತೃತ್ವದ ಸರ್ಕಾರದಲ್ಲಿ ಸಚಿವರು ಕಳಂಕಿತರಹಿತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಫಸಲ್‌ ಭೀಮಾ ಯೋಜನೆ, ಉಜ್ವಲ್ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ, ನಿರುದ್ಯೋಗಿಗಳ ಸ್ವಾವಲಂಬಿ ಬದುಕಿಗೆ ನೆರವಾಗಲು ಸ್ಟಾರ್ಟ್‌ ಅಪ್‌ ಯೋಜನೆ, ಐತಿಹಾಸಿಕ ಜಿಎಸ್‌ಟಿ ಕಾಯ್ದೆ, ಜನಧನ ಮೊದಲಾದ ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಎಲ್ಲಾ ವರ್ಗಗಳ ಉನ್ನತಿಗೆ ಶ್ರಮಿಸುತ್ತಿದ್ದಾರೆ. ಆದ್ದರಿಂದ ಅವರ ಕೈ ಬಲಪಡಿಸಲು ನಾಗರಿಕರ ಸಹಕಾರ ಬೇಕು ಎಂದರು.

ಬಿ.ಎಸ್.ಎನ್.ಎಲ್. ನಾಮ ನಿರ್ದೇಶಕ ಕನಕರಾಜು ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೇ ತರಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಪಥ ಮಾಡಿದ್ದಾರೆ ಎಂದರು. ಆ ಸಂಕಲ್ಪವನ್ನು ಸಾಕಾರಗೊಳಿಸಲು ಪಕ್ಷದ ಪದಾಧಿಕಾರಿಗಳು ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಜ್ಜುಗೊಳಿಸಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದರು.

ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಬೂದಿಗೆರೆ ನಾಗವೇಣಿ ಮಾತನಾಡಿ, ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಪಕ್ಷದ ನೂತನ ಪದಾಧಿಕಾರಿಗಳು ಬೂತ್‌ ಮಟ್ಟ, ಮಂಡಲ ಮಟ್ಟದಲ್ಲಿ ಕಾರ್ಯಕರ್ತರ ಪಡೆ ಸಜ್ಜುಗೊಳ್ಳಬೇಕು. ಮಹಿಳೆಯರು ಸಂಘಟಿತರಾಗಿ ಪಕ್ಷಕ್ಕೆ ಸಹಕಾರ ನೀಡಬೇಕು ಎಂದರು. ನೂರಾರು ಮಂದಿ ಮಹಿಳೆಯರು ಹಾಗೂ ನಾಗರಿಕರಿಗೆ ನೀರಿನ ಕ್ಯಾನು ವಿತರಣೆ ಮಾಡಲಾಯಿತು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜಗೌಡ, ನಗರ ಘಟಕದ ಅಧ್ಯಕ್ಷ ಚ.ವಿಜಯಬಾಬು, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಜಿಲ್ಲಾ ಘಟಕದ ಕಾರ್ಯದರ್ಶಿ ಬೂದಿಗೆರೆ ನಾರಾಯಣಸ್ವಾಮಿ, ಯುವ ಮೋರ್ಚಾ ಅಧ್ಯಕ್ಷ ಸುರೇಶ್, ಜಿಲ್ಲಾ ಘಟಕದ ರೈತ ಮೋರ್ಚಾ ಅಧ್ಯಕ್ಷ ಎನ್.ರಾಜಗೋಪಾಲ್, ಎಸ್.ಸಿ.ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT