ದೊಡ್ಡಬಳ್ಳಾಪುರ

ಹೊಸ ವರ್ಷ: ಚರ್ಚ್, ಮಂದಿರಗಳಲ್ಲಿ ಅಲಂಕಾರ

2018 ಹೊಸ ವರ್ಷ ತಾಲ್ಲೂಕಿನಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಹೊಸ ವರ್ಷದ ಅಂಗವಾಗಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ನಗರದ ಟಿ.ಬಿ.ವೃತ್ತದ ಬಳಿಯಿರುವ ಸೆಂಟ್ ಪೀಟರ್ಸ್‌ ಚರ್ಚ್‌ನಲ್ಲಿ ಹೊಸ ವರ್ಷದ ಅಂಗವಾಗಿ ವಿಶೇಷ ಪ್ರಾರ್ಥನೆ ನಡೆಯಿತು. ಫಾದರ್ ಚಾಕೋ.ಕೆ.ಸಿ ಪ್ರವಚನ ನೀಡಿದರು.

ಡಿ.ಕ್ರಾಸ್ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹೊಸ ವರ್ಷದ ಅಂಗವಾಗಿ ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು

ದೊಡ್ಡಬಳ್ಳಾಪುರ: 2018 ಹೊಸ ವರ್ಷ ತಾಲ್ಲೂಕಿನಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಹೊಸ ವರ್ಷದ ಅಂಗವಾಗಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ನಗರದ ಟಿ.ಬಿ.ವೃತ್ತದ ಬಳಿಯಿರುವ ಸೆಂಟ್ ಪೀಟರ್ಸ್‌ ಚರ್ಚ್‌ನಲ್ಲಿ ಹೊಸ ವರ್ಷದ ಅಂಗವಾಗಿ ವಿಶೇಷ ಪ್ರಾರ್ಥನೆ ನಡೆಯಿತು. ಫಾದರ್ ಚಾಕೋ.ಕೆ.ಸಿ ಪ್ರವಚನ ನೀಡಿದರು.

ನಗರದ ಡಿ.ಕ್ರಾಸ್ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹೊಸ ವರ್ಷದ ಅಂಗವಾಗಿ, ನವಗ್ರಹ ರಂಗೋಲಿ ಹಾಗೂ ವಿಗ್ರಹಗಳಿಗೆ ವಿಶೇಷ ಅಲಂಕಾರಗಳನ್ನು ಮಾಡಲಾಗಿತ್ತು.

ನಗರದ ಕುಚ್ಚಪ್ಪನಪೇಟೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯ, ರುಮಾಲೆ ವೃತ್ತದ ಗಣಪತಿ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಅಲಂಕಾರಗಳನ್ನು ಏರ್ಪಡಿಸಲಾಗಿತ್ತು. ಅಂಗಡಿ ಮುಗ್ಗಟ್ಟುಗಳಿಗೆ ವಿಶೇಷ ದೀಪಾಲಂಕಾರ. ಕೇಕ್ ಕತ್ತರಿಸುವ ಮೂಲಕ ವರ್ಷಾಚರಣೆ ಆಚರಣೆ, ಪರಸ್ಪರ ಶುಭಾಶಯಗಳ ವಿನಿಮಯ ಎಲ್ಲಡೆ ಕಂಡು ಬಂದಿತು.

ಜನತೆ ಮಧ್ಯ ರಾತ್ರಿ ಕಳೆದು ಹೊಸ ವರ್ಷದ ವೇಳೆಯಾಗುತ್ತಿರುವಂತೆಯೇ, ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಕೇಕ್‌ಗಳನ್ನು ಕತ್ತರಿಸಿ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳ ಮುಂದೆ ಹೊಸ ವರ್ಷದ ಶುಭ ಕೋರುವ ರಂಗೋಲಿಗಳು ಗಮನ ಸೆಳೆದವು.

Comments
ಈ ವಿಭಾಗದಿಂದ ಇನ್ನಷ್ಟು

ಕನಕಪುರ
ನೀರಲ್ಲಿ ಮುಳುಗಿ ಹೆಣ್ಣಾನೆ ಸಾವು

ಚೀಲಂದವಾಡಿ ಅರಣ್ಯ ವಲಯ ವ್ಯಾಪ್ತಿಯ ಶೆಟ್ಟಿ ಕೆರೆಯಲ್ಲಿ ಆನೆ ಮುಳುಗಿ ಸಾವನ್ನಪ್ಪಿದೆ.

20 Mar, 2018

ದೊಡ್ಡಬಳ್ಳಾಪುರ
ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣೇಶ್ವರಿ ಟ್ರಸ್ಟ್ ವತಿಯಿಂದ ಇಲ್ಲಿನ ಚಿಕ್ಕರಾಯಪ್ಪನಹಳ್ಳಿ ಯಲ್ಲಿ ಭಾನುವಾರ ‘ಶುದ್ಧ ಕುಡಿಯುವ ನೀರಿನ ಘಟಕ’ ಉದ್ಘಾಟಿಸಿಲಾಯಿತು.

20 Mar, 2018
ವೆಂಕಟಸ್ವಾಮಿಗೆ ಟಿಕೆಟ್ ನೀಡಲು ಒತ್ತಾಯ

ದೇವನಹಳ್ಳಿ
ವೆಂಕಟಸ್ವಾಮಿಗೆ ಟಿಕೆಟ್ ನೀಡಲು ಒತ್ತಾಯ

20 Mar, 2018
145 ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಗೆಳತಿ’ ಘಟಕ

ದೊಡ್ಡಬಳ್ಳಾಪುರ
145 ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಗೆಳತಿ’ ಘಟಕ

20 Mar, 2018
‘ಎಡ, ಬಲ ಸಮುದಾಯಕ್ಕೆ ಟಿಕೆಟ್‌ ನೀಡಿ’

ದೇವನಹಳ್ಳಿ
‘ಎಡ, ಬಲ ಸಮುದಾಯಕ್ಕೆ ಟಿಕೆಟ್‌ ನೀಡಿ’

19 Mar, 2018