ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಯರ್‌ ಸ್ಥಾನಕ್ಕೆ ಪೈಪೋಟಿ ಶುರು

ಪಾಲಿಕೆ ಮೇಯರ್‌–ಉಪಮೇಯರ್‌ ಸ್ಥಾನದ ಮೀಸಲಾತಿ ಪ್ರಕಟ
Last Updated 4 ಜನವರಿ 2018, 7:44 IST
ಅಕ್ಷರ ಗಾತ್ರ

ಮಂಗಳೂರು: ಕಾಂಗ್ರೆಸ್ ಬಹುಮತ ಇರುವ ಪ್ರಸಕ್ತ ಪಾಲಿಕೆ ಆಡಳಿತ ಮಂಡಳಿಯ ಕೊನೆಯ ಮೇಯರ್‌– ಉಪಮೇಯರ್‌ ಸ್ಥಾನದ ಮೀಸಲಾತಿ ಪ್ರಕಟವಾಗಿದ್ದು, ಮೇಯರ್‌ ಸ್ಥಾನಕ್ಕೆ ಏರಲು ಈಗಿನಿಂದಲೇ ತೆರೆಮರೆಯ ಕಸರತ್ತುಗಳು ಆರಂಭವಾಗಿವೆ.

ಕಾಂಗ್ರೆಸ್‌ ಆಡಳಿತದ ಐದನೇ ಹಾಗೂ ಕೊನೆಯ ಅವಧಿಯ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನಗಳನ್ನು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಮೇಯರ್‌–ಉಪಮೇಯರ್‌ ಸ್ಥಾನಕ್ಕೆ ತೀವ್ರ ರಾಜಕೀಯ ಲಾಬಿ ಶುರುವಾಗಿದೆ.

ಹಾಲಿ ಮೇಯರ್‌ ಕವಿತಾ ಸನಿಲ್‌, ಉಪಮೇಯರ್‌ ರಜನೀಶ್‌ ಅವರ ಅಧಿಕಾರ ಅವಧಿ ಮಾರ್ಚ್‌ 9ಕ್ಕೆ ಕೊನೆ ಗೊಳ್ಳಲಿದೆ. ಮಾರ್ಚ್‌ 10ರೊಳಗೆ ಚುನಾವಣೆ ನಡೆದು, ಹೊಸ ಮೇಯರ್‌-ಉಪಮೇಯರ್‌ ಆಯ್ಕೆ ಆಗಬೇಕು. ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ 35 ಸ್ಥಾನ ಹೊಂದಿರುವ ಕಾಂಗ್ರೆಸ್‌ ಬಹು ಮತ ಪಡೆದಿದೆ. ಮೀಸಲಾತಿ ಸಾಮಾನ್ಯ ವರ್ಗಕ್ಕೆ ಬಂದಿರುವುದರಿಂದ 35 ಸದ ಸ್ಯರೂ ಮೇಯರ್‌, ಉಪಮೇಯರ್‌ ಸ್ಥಾನಕ್ಕೆ ಅರ್ಹರು. ಪಾಲಿಕೆಯಲ್ಲಿ ಬಿಜೆಪಿ 20, ಜೆಡಿಎಸ್‌ 2, ಸಿಪಿಎಂ 1, ಪಕ್ಷೇತರ 1, ಎಸ್‌ಡಿಪಿಐ 1 ಸದಸ್ಯರನ್ನು ಹೊಂದಿವೆ.

ಕಾಂಗ್ರೆಸ್‌ ಆಡಳಿತದ ಪ್ರಥಮ ವರ್ಷ ಮೇಯರ್‌ಗಾದಿ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್‌ ಸ್ಥಾನ ಮಹಿಳಾ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಎರಡನೇ ವರ್ಷ ಮಹಿಳಾ ಸಾಮಾನ್ಯ ವರ್ಗಕ್ಕೆ ಹಾಗೂ ಸಾಮಾನ್ಯ ವರ್ಗಕ್ಕೆ ನಿಗದಿಯಾಯಿತು. ಮೂರನೇ ವರ್ಷ ಸಾಮಾನ್ಯ ವರ್ಗ ಹಾಗೂ ಪರಿಶಿಷ್ಟ ಪಂಗಡ ಮಹಿ ಳೆಗೆ ಅವಕಾಶ ನೀಡಲಾಗಿತ್ತು. ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಪಂಗಡದ ಸದಸ್ಯೆ ಇಲ್ಲದೇ ಇರುವುದರಿಂದ ಉಪ ಮೇಯರ್‌ ಸ್ಥಾನ ಬಿಜೆಪಿ ಪಾಲಾಗಿತ್ತು. ನಾಲ್ಕನೇ ಅವಧಿಗೆ ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್‌ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು.

ಲೆಕ್ಕಾಚಾರ ಆರಂಭ: ಮುಂದಿನ ಮೇಯರ್‌, ಉಪ ಮೇಯರ್‌ ಆಯ್ಕೆಗೆ ಇನ್ನೂ ಎರಡು ತಿಂಗಳು ಇದ್ದು, ಈಗಿ ನಿಂದಲೇ ಆಕಾಂಕ್ಷಿಗಳ ತೆರೆಮರೆಯ ಕಸರತ್ತು ಶುರುವಾಗಿದೆ.

ಒಂದೆಡೆ ವಿಧಾನಸಭೆ ಚುನಾವಣೆ, ಇನ್ನೊಂದೆಡೆ ಪ್ರಸ್ತುತ ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಇದು ಕೊನೆ ಯ ಅವಕಾಶ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯ ಲಾಭ-ನಷ್ಟದ ಲೆಕ್ಕಾಚಾರ ಇರಿಸಿಕೊಂಡೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕಠಿಣ ಸ್ಥಿತಿ ಕಾಂಗ್ರೆಸ್‌ ನಾಯಕರಿಗಿದೆ.
ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಜಾತಿ ಲೆಕ್ಕಾಚಾರದ ಮೂಲಕ ಮೇಯರ್‌ ಸ್ಥಾನವನ್ನು ಕ್ರಮವಾಗಿ ಬಂಟ, ಕ್ರೈಸ್ತ, ಜೋಗಿ, ಬಿಲ್ಲವ ಸಮು ದಾಯಗಳಿಗೆ ನೀಡಲಾಗಿದ್ದು, ಕೊನೆಯ ಅವಧಿಗೂ ಮೇಯರ್‌ ಸ್ಥಾನಕ್ಕೆ ಜಾತಿ ಲೆಕ್ಕಾಚಾರದಲ್ಲೇ ಅಭ್ಯರ್ಥಿಯ ಆಯ್ಕೆ ಆಗುವ ಸಾಧ್ಯತೆ ಹೆಚ್ಚಾಗಿದೆ.

ಮುಂದಿನ ಅವಧಿಗೆ ಮೇಯರ್‌ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ವಿಧಾನಸಭೆ ಚುನಾವಣೆಯನ್ನು ದೃಷ್ಟಿ ಯಲ್ಲಿಟ್ಟುಕೊಂಡೇ ಈ ಸ್ಥಾನಗಳಿಗೆ ಅಭ್ಯ ರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆ ಹೆಚ್ಚು ಎನ್ನುವ ಮಾತು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT