ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆ ಖಂಡಿಸಿ ಪ್ರತಿಭಟನೆ

Last Updated 5 ಜನವರಿ 2018, 6:31 IST
ಅಕ್ಷರ ಗಾತ್ರ

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಅವರ ಕೊಲೆಯನ್ನು ಖಂಡಿಸಿ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಮಣಿಪಾಲದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಖಾಸಗಿ ಬಸ್ ನಿಲ್ದಾಣದ ಎದುರು ಜಮಾಯಿಸಿದ ಕಾರ್ಯಕರ್ತರು ಕೊಲೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪಿಸಿದರು. ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಯುವಕನ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು. ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಕೊಲೆ ಮಾಡುತ್ತಿರುವುದು ಖಂಡನೀಯ. ಇದಕ್ಕೆಲ್ಲ ಪಾಪುಲರ್ ಫ್ರಂಟ್ ಆಫ್ ಇಂಡಿಯಾ, ಕೆಎಫ್‌ಡಿ ಸಂಘಟನೆಗಳೆ ನೇರ ಹೊಣೆಯಾಗಿದ್ದು ಅವುಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ನಿರಂತರವಾಗಿ ಹಿಂದೂಗಳ ಕೊಲೆ ನಡೆಯುತ್ತಿದ್ದು ಅದನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗೃಹ ಇಲಾಖೆಯೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕಾಂಗ್ರೆಸ್ ಶಾಸಕರು ಇರುವ ಕಡೆಯೇ ಇಂತಹ ಘಟನೆಗಳು ನಡೆಯುತ್ತಿದ್ದು ಜನರಿಗೆ ರಕ್ಷಣೆ ಇಲ್ಲದಂತಾಗಿದೆ. ಮೃತ ದೀಪಕ್‌ ಶವ ಮೆರವಣಿಗೆ ಮಾಡಲು ಸಹ ಅವಕಾಶ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಎಲ್ಲ ಧರ್ಮಗಳ ಜನರಿಗೂ ರಕ್ಷಣೆ ಇತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಹಿಂದೂ ಮತ್ತು ಮುಸ್ಲಿಮರ ಕೊಲೆಗಳು ಹೆಚ್ಚಾಗಿವೆ. ಆಡಳಿತ ವೈಫಲ್ಯವೇ ಇದಕ್ಕೆ ಕಾರಣ ಎಂದು ದೂರಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಸುಪ್ರಸಾದ ಶೆಟ್ಟಿ ಇದ್ದರು.

ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ನಿರಂತರವಾಗಿ ಕೊಲೆಗಳು ನಡೆಯುತ್ತಿದ್ದರೂ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.
ಕೆ. ರಘುಪತಿ ಭಟ್, ಮಾಜಿ ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT