ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೆ ಇಂದು ಮುಖ್ಯಮಂತ್ರಿ: ಗರಿಗೆದರಿದ ನಿರೀಕ್ಷೆ

Last Updated 6 ಜನವರಿ 2018, 6:01 IST
ಅಕ್ಷರ ಗಾತ್ರ

ಶಿವಮೊಗ್ಗ:ಚುನಾವಣೆಯ ಹೊಸ್ತಿಲಲ್ಲಿ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಿದ್ದು, ಜನರ ನಿರೀಕ್ಷೆಗಳೂ ಗರಿಗೆದರಿವೆ. ಬೆಳಿಗ್ಗೆ ಸಾಗರ, ಮಧ್ಯಾಹ್ನ ತೀರ್ಥಹಳ್ಳಿ, ಸಂಜೆ ಶಿವಮೊಗ್ಗ ನಗರದಲ್ಲಿ ನಡೆಯುವ ಸಮಾವೇಶದಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ಪೂರ್ಣಗೊಂಡ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ನೂರಾರು ಕೋಟಿ ವೆಚ್ಚದಲ್ಲಿ ಕೈಗೊಳ್ಳುವ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸಮಾವೇಶಕ್ಕೆ ಗಣ್ಯರ ದಂಡು: ಇದು ಸರ್ಕಾರಿ ಕಾರ್ಯಕ್ರಮವಾದ ಕಾರಣ ಜಿಲ್ಲೆಗೆ ಗಣ್ಯರ ದಂಡೇ ಬರುತ್ತಿದೆ. ಸಚಿವರಾದ ಟಿ.ಬಿ.ಜಯಚಂದ್ರ, ಆರ್.ವಿ. ದೇಶಪಾಂಡೆ, ಪ್ರಿಯಾಂಕ ಖರ್ಗೆ, ಬಸವರಾಜ ರಾಯರಡ್ಡಿ, ಎಚ್.ಕೆ.ಪಾಟೀಲ್, ತನ್ವೀರ್ ಸೇಟ್, ರಾಮಲಿಂಗಾ ರೆಡ್ಡಿ, ಎಚ್.ಸಿ.ಮಹಾದೇವಪ್ಪ, ಎಚ್. ಆಂಜನೇಯ, ಆರ್. ರೋಷನ್ ಬೇಗ್, ಎಂ.ಬಿ. ಪಾಟೀಲ, ಎಂ. ಕೃಷ್ಣಪ್ಪ, ಶರಣ ಪ್ರಕಾಶ್ ಪಾಟೀಲ್ ಭಾಗವಹಿಸುತ್ತಿದ್ದಾರೆ.

ಸಂಸದರಾದ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಬಿಜೆಪಿಯ ಜನಪ್ರನಿಧಿಗಳಿಗೂ ಆಹ್ವಾನ ನೀಡಲಾಗಿದೆ. ಆದರೆ, ಸಮಾವೇಶಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಆ ಪಕ್ಷದ ಜನಪ್ರತಿನಿಧಿಗಳು ಭಾಗವಹಿಸುತ್ತಾರೆಯೇ ಎನ್ನುವ ಪ್ರಶ್ನೆ ಮೂಡಿದೆ.

ಸಿದ್ಧತೆ ಪೂರ್ಣ: ಸಾಧನಾ ಸಮಾವೇಶ ನಡೆಯುವ ಮೂರು ಭಾಗಗಳಲ್ಲೂ ವೇದಿಕೆ, ಪೆಂಡಾಲ್ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದ್ದು, ಕುರ್ಚಿಗಳನ್ನು ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT