ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಜಾಗ್ರತೆ ವಹಿಸಿದ್ದರೆ ಕೊಲೆ ತಡೆಯಬಹುದಿತ್ತು

ಗುಪ್ತದಳ, ಪೊಲೀಸ್‌ ಇಲಾಖೆ ವೈಫಲ್ಯ– ಮುಖ್ಯಮಂತ್ರಿ ಅಸಮಾಧಾನ
Last Updated 17 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಮಂಗಳೂರಿನ ದೀಪಕ್‌ ರಾವ್‌ ಹಾಗೂ ಅಹಮ್ಮದ್‌ ಬಶೀರ್‌ ಕೊಲೆಗಳನ್ನು ತಡೆಯಬಹುದಿತ್ತು.

ಎಂದು ಗುಪ್ತದಳ ಹಾಗೂ ಪೊಲೀಸರ ಕಾರ್ಯವೈಖರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎರಡೂ ಕೊಲೆಗಳನ್ನು ಮೂಲಭೂತವಾದಿ ಸಂಘಟನೆಗೆ ಸೇರಿದವರು ನಡೆಸಿದ್ದಾರೆ. ಅವರು ಅಪಾಯವನ್ನುಂಟು ಮಾಡುತ್ತಾರೆ ಎಂಬುದು ಮೊದಲೇ ಗೊತ್ತಿರುತ್ತದೆ. ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕಿತ್ತು. ಇನ್ನು ಮುಂದೆ ಮುಂಜಾಗ್ರತಾ ಕ್ರಮಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT