ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ, ರಾಜ್ಯ ಸರ್ಕಾರಕ್ಕೆ ಮನವಿ
Last Updated 18 ಜನವರಿ 2018, 6:58 IST
ಅಕ್ಷರ ಗಾತ್ರ

ಕಲಘಟಗಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ತಕ್ಷಣ ಈಡೇರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ಮಾಡಿದರು.

ಬೆಳಿಗ್ಗೆ ಹನ್ನೆರಡು ಮಠದ ಹತ್ತಿರ ಸಭೆ ಸೇರಿದ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ನಂತರ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆರವಣಿಗೆ ಹೊರಟರು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ತಹಶೀಲ್ದಾರ್‌ ಕಚೇರಿಗೆ ತೆರಳಿ ತಹಶೀಲ್ದಾರ್‌ ವೈ.ಎಸ್. ಗೊಣೆಣ್ಣವರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪದ್ಮಾವತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ₹18 ಸಾವಿರ ನಿಗದಿ ಮಾಡಬೇಕು. ಇಎಸ್‌ಐ, ಪಿಎಫ್, ಗ್ರಾಚ್ಯುಟಿಗಳನ್ನು ಕೂಡಲೇ ಜಾರಿಗೆ ತರಬೇಕು. ‘ಸಿ’ ಮತ್ತು ‘ಡಿ’ ಗ್ರೂಪ್‌ ನೌಕರರನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು, ಕನಿಷ್ಠ ₹3,000 ಪಿಂಚಣಿ ನೀಡಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮುಷ್ಕರದಲ್ಲಿ ಭಾಗವಹಿಸಿದ್ದರು. ಉಳಿದಂತೆ ಕೇಂದ್ರಗಳಲ್ಲಿ ಸಹಾಯಕಿಯರು ಅಂಗನವಾಡಿಯ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು.

ಸಂಘಟನೆಯ ತಾಲ್ಲೂಕು ಘಟಕ ಅಧ್ಯಕ್ಷೆ ಚನ್ನಕ್ಕ ಅಂಗಡಿ, ಕಾರ್ಯದರ್ಶಿ ಸರೋಜಾ ಹಾರೂಗೇರಿ, ಮಂಗಳಾ ಬೋಳಾರ, ರಾಜೇಶ್ವರಿ ಪಾಟೀಲ, ಪದ್ಮಾವತಿ ದೇಸಾಯಿ, ಮಂಜುಳಾ ಬಳಗೇರ, ಕಲ್ಲವ್ವ ಹುಲಿ, ಕಸ್ತೂರಿ ಮೆಣಸಗಿ, ಶಾಂತಾ ಕ್ಯಾಮಪ್ಪನವರ, ದಾಕ್ಷಾಯಣಿ ತಡಸಮಠ, ಸಾವಿತ್ರಿ ಕುಸಬಿ, ಮಂಜುಳಾ ಬಳಿಗೇರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನವಲಗುಂದ ವರದಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಅಂಗನವಾಡಿ ಕಾರ್ಯಕರ್ತೆಯರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಿ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ 2010ರಿಂದ ಯಾವುದೇ ಗೌರವಧನ ಹೆಚ್ಚಿಸಿಲ್ಲ, ಮುಂಬರುವ ಆಯವ್ಯಯದಲ್ಲಿ ಕನಿಷ್ಠ ಕೂಲಿ ಜಾರಿ ಮಾಡಬೇಕು. 25 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದವರಿಗೆ ಪಿಂಚಣಿ ಜಾರಿ ಮಾಡಬೇಕು. ಮಾತೃಪೂರ್ಣ ಯೋಜನೆಯ ಮೂಲ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಸರಿಯಾದ ಜಾಗೆ, ಪಾತ್ರೆ, ಸ್ಟೌ, ಗ್ಯಾಸ್, ಮೊಟ್ಟೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಣ್ಣ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ ಸಹಾಯಕಿಯರನ್ನು ನೇಮಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ ಗೌರವಧನ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನೂರ್‌ಜಾನ್‌ ಸಮುದ್ರಿ, ಲತೀಫ್‌ ಬಾಗಲಕೋಟ, ಶಂಕ್ರಮ್ಮ ಹಿರೇಮಠ, ಐ.ಡಿ.ಸುಂಕದ, ಅಕ್ಕಮ್ಮ ಅಂಗಡಿ, ಬಸಮ್ಮ ಕಳಸದ, ಹೇಮಾ ಸುಳ್ಳದ, ಕಲಾವತಿ ಪಿರಗಣ್ಣವರ, ರೇಣುಕಾ ಶ್ರೀಹರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT