ಚನ್ನಪಟ್ಟಣ

‘ಸರ್ಕಾರಿ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಔಷಧಿ’

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾಳಜಿ ಫಲವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗುತ್ತಿರುವ ಜನೌಷಧ ಮಳಿಗೆ ಬಡ ರೋಗಿಗಳಿಗೆ ವರದಾನವಾಗಲಿದೆ

ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರಂಭವಾದ ಪ್ರಧಾನಮಂತ್ರಿ ಜನೌಷಧ ಮಳಿಗೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಮರನಾಥ್ ಚಾಲನೆ ನೀಡಿದರು

ಚನ್ನಪಟ್ಟಣ: ರೋಗಿಗಳ ಅನುಕೂಲಕ್ಕಾಗಿ ಗುಣಮಟ್ಟದ ಔಷಧಿ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಧಾನಮಂತ್ರಿ ಜನೌಷಧ ಮಳಿಗೆ ತೆರೆಯಲಾಗಿದ್ದು, ಶೇ50 ರಷ್ಟು ರಿಯಾಯಿತಿ ದರದಲ್ಲಿ ಔಷಧಿ ಸಿಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಮರನಾಥ್ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಸಂಸ್ಥೆ ವತಿಯಿಂದ ಆರಂಭವಾದ ಜನೌಷಧಿ ಮಳಿಗೆಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಹೆಚ್ಚು ಮಂದಿ ಸರ್ಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ. ಉಚಿತವಾಗಿ ಔಷಧಿ ನೀಡಲಾಗುತ್ತದೆ. ಆದರೆ, ಉಚಿತವಾಗಿ ಸಿಗದ ಔಷಧಿಗಳು ಜನೌಷಧ ಮಳಿಗೆಯಲ್ಲಿ ರಿಯಾಯಿತಿ ದರದಲ್ಲಿ ದೊರೆಯುತ್ತದೆ. ಸಾರ್ವಜನಿಕರು ಇದನ್ನು ಸದುಪಯೋಗಪ‍ಡಿಸಿಕೊಳ್ಳಬೇಕು ಎಂದರು.

ಆಸ್ಪತ್ರೆ ವೈದ್ಯಾಧಿಕಾರಿ ಡಾ.ಅಶೋಕ್ ವೆಂಕೋಬರಾವ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾಳಜಿ ಫಲವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗುತ್ತಿರುವ ಜನೌಷಧ ಮಳಿಗೆ ಬಡ ರೋಗಿಗಳಿಗೆ ವರದಾನವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಎಂಎಸ್ಐಎಲ್ ಉಸ್ತುವಾರಿ ಸಿ.ಬೈರ, ಜಿಲ್ಲಾ ಮೇಲ್ವಿಚಾರಕ ವೆಂಕಟೇಶಮೂರ್ತಿ, ಹಿರಿಯ ಫಾರ್ಮಾಸಿಸ್ಟ್ ವೇದಮೂರ್ತಿ, ಫಾರ್ಮಾಸಿಸ್ಟ್ ನಿಖಿತಾ, ಸುಧೀಂದ್ರಕುಮಾರ್, ಪ್ರದೀಪ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಉರುಳಿಗೆ ಬಿದ್ದ ಕರಡಿ ರಕ್ಷಣೆ

ರಾಮನಗರ
ಉರುಳಿಗೆ ಬಿದ್ದ ಕರಡಿ ರಕ್ಷಣೆ

17 Feb, 2018

ರಾಮನಗರ
ಅನಿತಾ ಸ್ಪರ್ಧೆ: ಕಾರ್ಯಕರ್ತರಲ್ಲಿ ಕುತೂಹಲ

ಬೆಂಗಳೂರಿನಲ್ಲಿ ಶನಿವಾರ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಸಮಾವೇಶ ನಡೆಯಲಿದೆ. ಇದೇ ಸಂದರ್ಭ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯು...

17 Feb, 2018
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿ

ರಾಮನಗರ
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಿ

17 Feb, 2018

ಬಾಣವಾಡಿ
ಮನ ಸೆಳೆದ ‘ರಾಜಾ ಸತ್ಯವ್ರತ’ ನಾಟಕ

ಪೌರಾಣಿಕ ನಾಟಕ ಅಭಿನಯಿಸುವ ಕಲಾವಿದರು ಮತ್ತು ವೀಕ್ಷಿಸುವ ಕಲಾಭಿಮಾನಿಗಳಲ್ಲಿ ನೈತಿಕ ಬದಲಾವಣೆ ಉಂಟಾಗುತ್ತಿದೆ ಎಂದು ನೆಲಮಂಗಲ ಶಾಸಕ ಡಾ.ಶ್ರೀನಿವಾಸಮೂರ್ತಿ ತಿಳಿಸಿದರು.

17 Feb, 2018

ಬಿಡದಿ
3,800 ಮಕ್ಕಳಿಗೆ ಫಿಲ್ಮ್‌ ಸಿಟಿ ಪ್ರವಾಸ ಭಾಗ್ಯ!

ವೇದಿಕೆ ವತಿಯಿಂದ ಹೋಬಳಿಯ ಸರ್ಕಾರಿ ಶಾಲೆಗಳ ಮಕ್ಕಳಿಗಾಗಿ ಉಚಿತ ಶೈಕ್ಷಣಿಕ ಪ್ರವಾಸ ಆಯೋಜಿಸಿದ್ದು, ಈ ಅಂಗವಾಗಿ ಬುಧವಾರ ಇನೋವೇಟಿವ್‌ ಫಿಲ್ಮ್ ಸಿಟಿ ಆವರಣದಲ್ಲಿ ನಡೆದ...

16 Feb, 2018