ಉಡುಪಿ

ಕಾನೂನು ಉಲ್ಲಂಘಿಸುವ ಖಾಸಗಿ ಬಸ್ ವಿರುದ್ಧ ಕ್ರಮ

ಮಟ್ಕಾ ದಂಧೆಯ ಬಗ್ಗೆ ನಾಲ್ಕು ದೂರುಗಳು ಬಂದವು. ಮಟ್ಕಾ ದಂಧೆ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಪರ್ಯಾಯದಂತಹ ಕಾರ್ಯಕ್ರಮ ಇದ್ದರೂ ಕಳೆದ ವಾರ 13 ಪ್ರಕರಣ ದಾಖಲಿಸಿ 13 ಮಂದಿಯನ್ನು ಬಂಧಿಸಲಾಗಿದೆ.

ಉಡುಪಿ: ಖಾಸಗಿ ಬಸ್ ಮಾಲೀಕರ ಸಭೆ ಕರೆದು ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗುತ್ತದೆ. ಒಂದು ವಾರದ ನಂತರವೂ ಸರಿ ಹೋಗದಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಎಚ್ಚರಿಕೆ ನೀಡಿದರು.

ಸಾರ್ವಜನಿಕರ ಅಹವಾಲು ಆಲಿಸುವ ಫೋನ್ ಇನ್ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ಕರ್ಕಶ ಹಾರ್ನ್ ಸೇರಿದಂತೆ ಹಲವು ನಿಯಮಗಳನ್ನು ಖಾಸಗಿ ಬಸ್ ಚಾಲಕರು ಉಲ್ಲಂಘನೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅವರೊಂದಿಗೆ ಸಭೆ ನಡೆಸಿ ತಿಳಿವಳಿಕೆ ನೀಡಲಾಗುತ್ತದೆ. ಆ ನಂತರವೂ ಮುಂದುವರೆದರೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ಕರೆ ಮಾಡಿದ ಮಹಿಳೆಯೊಬ್ಬರು ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿರುವ ಬಗ್ಗೆ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಸರಳ ಕಾನೂನುಗಳ ಬಗ್ಗೆ ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ದಿನ ನಿತ್ಯದಲ್ಲಿ ಬಳಕೆಯಲ್ಲಿರುವ ಕಾನೂನಿನ ಬಗ್ಗೆ ಜನರಿಗೆ ಮಾಹಿತಿ ನೀಡುವ ಅಗತ್ಯವಿದೆ. ಶಾಲೆಗಳಲ್ಲಿ ಕಾರ್ಯಕ್ರಮ ಏರ್ಪಡಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.

ಮಟ್ಕಾ ದಂಧೆಯ ಬಗ್ಗೆ ನಾಲ್ಕು ದೂರುಗಳು ಬಂದವು. ಮಟ್ಕಾ ದಂಧೆ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಪರ್ಯಾಯದಂತಹ ಕಾರ್ಯಕ್ರಮ ಇದ್ದರೂ ಕಳೆದ ವಾರ 13 ಪ್ರಕರಣ ದಾಖಲಿಸಿ 13 ಮಂದಿಯನ್ನು ಬಂಧಿಸಲಾಗಿದೆ. ಹಿಂದಿನ ಎಸ್ಪಿ ಅವರು ಕೆಲವರನ್ನು ಗಡಿಪಾಡು ಮಾಡಲು ಶಿಫಾರಸ್ಸು ಮಾಡಿದ್ದಾರೆ. ಆ ಪ್ರಕ್ರಿಯೆ ಮುಂದುವರೆಯುತ್ತದೆ. ದಂಧೆಕೋರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದರು.

ಪೋಷಕರು ಮಕ್ಕಳ ಕಾಳಜಿ ವಹಿಸಬೇಕು

ಆಟೊ ರಿಕ್ಷಾಗಳಲ್ಲಿ ಅಧಿಕ ಸಂಖ್ಯೆಯ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿರುವ ದೂರಿನ ಬಗ್ಗೆ ಮಾತನಾಡಿದ ಎಸ್ಪಿ ಅವರು, ಇಲ್ಲಿ ಪೋಷಕರ ಪಾತ್ರ ಮುಖ್ಯವಾಗುತ್ತದೆ ಹಾಗೂ ಅವರೇ ಹೆಚ್ಚಿನ ಕಾಳಜಿ ವಹಿಸಬೇಕು. ಅಧಿಕ ಮಕ್ಕಳನ್ನು ಕರೆದೊಯ್ಯವ ವಾಹನಗಳಲ್ಲಿ ಅವರು ತಮ್ಮ ಮಕ್ಕಳನ್ನು ಕಳುಹಿಸಬಾರದು. ಶಾಲೆಗಳು ಸಹ ಇಂತಹ ವಿಷಯಗಳನ್ನು ಸೂಕ್ಷ್ಮವಾಗಿ ನೋಡಬೇಕು. ಪೊಲೀಸರು ಸಹ ತಮ್ಮ ಕರ್ತವ್ಯ ನಿರ್ವಹಿಸುವರು ಎಂದರು.

ಹಿಂದಿನ ವಾರದ ಫೋನ್ ಇನ್ ಕಾರ್ಯಕ್ರಮದಲ್ಲ ಕೇಳಿ ಬಂದ ದೂರುಗಳ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. 13 ಮಟ್ಕಾ, 3 ಜೂಜಾಟ, ಮಾದಕ ವಸ್ತು ಕಾಯ್ದೆ 3, ಸಿಗರೇಟು ಮತ್ತು ಇತರ ತಂಬಾಕು ಪದಾರ್ಥ ನಿಷೇಧ ಕಾಯ್ದೆ 30, ಪಾನಮತ್ತ ಚಾಲನೆ 6, ಕರ್ಕಶ ಹಾರ್ನ್ 14, ಹೆಲ್ಮೆಟ್ ಇಲ್ಲದೆ ಚಾಲನೆ, ನೋ ಪಾರ್ಕಿಂಗ್ ನಿಲುಗಡೆ ಸೇರಿ ಸುಮಾರು 800 ಪ್ರಕರಣಗಳನ್ನು ಮೋಟಾರು ವಾಹನ ಕಾಯ್ದೆ ಅನ್ವಯ ಹಾಕಲಾಗಿದೆ.

Comments
ಈ ವಿಭಾಗದಿಂದ ಇನ್ನಷ್ಟು
‘ನೀರಿನ ಮರುಪೂರಣ ಬದುಕಿನ ಒಂದು ಭಾಗವಾಗಬೇಕು’

ಅಂತರ್ಜಲ ಜಾಗೃತಿ ಕಾರ್ಯಾಗಾರ
‘ನೀರಿನ ಮರುಪೂರಣ ಬದುಕಿನ ಒಂದು ಭಾಗವಾಗಬೇಕು’

15 Feb, 2018

ಉಡುಪಿ
ಆಳ ಸಮುದ್ರ ಮೀನುಗಾರರ ಮುಷ್ಕರ ಅಂತ್ಯ

ಬೆಳಕು ಮೀನುಗಾರಿಕೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಉದ್ಭವಿಸಿದ್ದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಮೀನುಗಾರರ ಮಾತೃ ಸಂಘವಾದ ಮಲ್ಪೆ ಮೀನುಗಾರರ ಸಂಘ ಯಶಸ್ವಿಯಾಗಿದೆ.

15 Feb, 2018
ಬಾಲ್ಯ ವಿವಾಹ ತಡೆಗೆ ಕ್ರಮ ಕೈಗೊಳ್ಳಿ: ಡಿ.ಸಿ ಪ್ರಿಯಾಂಕ

ಸಮನ್ವಯ ಸಮಿತಿಯ ಸಭೆ
ಬಾಲ್ಯ ವಿವಾಹ ತಡೆಗೆ ಕ್ರಮ ಕೈಗೊಳ್ಳಿ: ಡಿ.ಸಿ ಪ್ರಿಯಾಂಕ

15 Feb, 2018

ಉಡುಪಿ
ಷೇರು ಮಾರುಕಟ್ಟೆ ಹೂಡಿಕೆ ಅತ್ಯುತ್ತಮ ಆಯ್ಕೆ: ಬಿ.ಹರೀಶ್

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಂಶ ಗಳಿಸಬಹುದೇ ಹೊರತು ತ್ವರಿತ ಗಳಿಕೆ ಮಾಡಲು ಸಾಧ್ಯವಿಲ್ಲ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸಂಸ್ಥೆಯ ಉಡುಪಿ...

15 Feb, 2018
ತಂತ್ರಗಾರಿಕೆ ಮೂಲಕ ಚುನಾವಣೆ ಗೆಲ್ಲಬೇಕು: ಸಂತೋಷ್

ಉಡುಪಿ
ತಂತ್ರಗಾರಿಕೆ ಮೂಲಕ ಚುನಾವಣೆ ಗೆಲ್ಲಬೇಕು: ಸಂತೋಷ್

15 Feb, 2018