ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಕಾಲೇಜು: ನಿರ್ಮಾಣ ವಿಳಂಬಕ್ಕೆ ಆಕ್ರೋಶ

Last Updated 22 ಜನವರಿ 2018, 9:59 IST
ಅಕ್ಷರ ಗಾತ್ರ

ಹಿರೀಸಾವೆ: ಹೋಬಳಿಯ ದಿಡಗ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಸ್ಥಳೀಯ ಜನಪ್ರತಿನಿಧಿಗಳು ದೂರಿದ್ದಾರೆ.

ಕೆಆರ್‌ಐಡಿಎಲ್ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯು ₹52 ಲಕ್ಷ ವೆಚ್ಚದಲ್ಲಿ 2 ಕೊಠಡಿಗಳ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 2016ರಲ್ಲಿ ಆರಂಭಿಸಿದೆ. ಆದರೆ, ಕಾಮಗಾರಿ ಕಳಪೆಯಾಗಿದ್ದು, ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇಲಾಖೆ ಅಧಿಕಾರಿಗಳು ಗಮನಹರಿಸಿ ಕಾಮಗಾರಿಯನ್ನು ವೀಕ್ಷಿಸಿ, ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪುಟ್ಟರಾಜು, ದಿಡಗ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಎಸ್.ಕುಮಾರ್, ರವಿಕುಮಾರ್, ರಾಜು ಆಗ್ರಹಿಸಿದ್ದಾರೆ.

‘ವರ್ಷ ಕಳೆದರೂ, ಕಾಮಗಾರಿ ಪೂರ್ಣಗೊಂಡಿಲ್ಲ. ಸರಿಯಾಗಿ ಕ್ಯೂರಿಗ್‌ ಮಾಡುತ್ತಿಲ್ಲ. ನಿರ್ಮಾಣ ಗುಣಮಟ್ಟವೂ ಅಗ್ಗವಾಗಿದೆ. ಸಂಬಂಧಿಸಿದ ಎಂಜಿನಿಯರ್ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT