ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ವರವಾದ ಹೈನುಗಾರಿಕೆ

Last Updated 23 ಜನವರಿ 2018, 7:24 IST
ಅಕ್ಷರ ಗಾತ್ರ

ಮಳವಳ್ಳಿ: ಜಾನುವಾರು ಸಾಕಾಣಿಕೆ ಇತ್ತೀಚಿನ ದಿನಗಳಲ್ಲಿ ಮುಖ್ಯ ಕಸುಬಾಗಿ ಮಾರ್ಪಾಡಾಗಿದ್ದು, ರೈತರಿಗೆ ನಿತ್ಯ ಹಣ ಕೊಡುವ ಉದ್ಯೋಗವಾಗಿದೆ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಎಂ.ಪಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು.

ಪಟ್ಟಣದ ಪಶು ಇಲಾಖೆ ಕಚೇರಿ ಆವರಣದಲ್ಲಿ ಈಚೆಗೆ ಜಾನುವಾರು ಅಧಿಕಾರಿಗಳು, ಹಿರಿಯ ಪಶು ವೈದ್ಯಕೀಯ ಪರೀಕ್ಷಕರಿಗೆ ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಾನುವಾರುಗಳ ವೈಜ್ಞಾನಿಕ ನಿರ್ವಹಣೆ ಮಾಡುವುದರಿಂಂದ ಲಾಭಾಂಶ ಹೆಚ್ಚಿಸಿ ರೈತರು ಆರ್ಥಿಕ ಸಫಲತೆ ಪಡೆಯಬಹದು. ಇದಕ್ಕೆ ಪೂರಕವಾಗಿ ವರ್ಷದಲ್ಲಿ ಕನಿಷ್ಟ ಎರಡು ಬಾರಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ರೈತರಿಗೆ ಅರಿವು ಮೂಡಿಸಿ ಎಂದು ಸಲಹೆ ನೀಡಿದರು.

ವರ್ಗಾವಣೆಗೊಂಡ ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಪರಮೇಶ್ವರಪ್ಪ ಅವರನ್ನು ಬೀಳ್ಕೊಡಲಾಯಿತು. ಡಾ. ಬಾಲಸುಂದರ್, ಉದಯ್ ಕುಮಾರ್, ನಾಗರಾಜು, ಗಂಗಾಧರಸ್ವಾಮಿ, ಪುಟ್ಟರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT