ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮುಂಡಿಬೆಟ್ಟದ ತಪ್ಪಲಲ್ಲಿ ಮುಖಾಮುಖಿಯಾದ ಚಿರತೆ–ಮುಳ್ಳುಹಂದಿ

Last Updated 29 ಜನವರಿ 2018, 9:32 IST
ಅಕ್ಷರ ಗಾತ್ರ
ADVERTISEMENT

ಮೈಸೂರು: ಚಿರತೆ ಹಾಗೂ ಮುಳ್ಳುಹಂದಿ ರಾತ್ರಿ ವೇಳೆ ರಸ್ತೆಯಲ್ಲಿ ಓಡಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಚಾಮುಂಡಿಬೆಟ್ಟದ ತಪ್ಪಲಿನ ರೇಸ್‌ಕೋರ್ಸ್‌ ಹಿಂಭಾಗದಲ್ಲಿ ಈ ಪ್ರಾಣಿಗಳು ಸಂಚರಿಸಿವೆ ಎನ್ನಲಾಗುತ್ತಿದೆ. ಇದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿಲ್ಲ.

ರಸ್ತೆಯಲ್ಲಿ ಸಾಗುತ್ತಿದ್ದ ಕಾರಿಗೆ ಚಿರತೆ ಅಡ್ಡ ಬಂದಿದೆ. ಗಾಂಭೀರ್ಯದಿಂದ ಸ್ವಲ್ಪ ದೂರ ಹೆಜ್ಜೆ ಹಾಕುತ್ತ ಒಂದು ಬದಿಯಿಂದ ಮತ್ತೊಂದು ಬದಿಗೆ ಸಾಗುತ್ತದೆ. ಜತೆಗೆ, ಚಿರತೆಯ ಹಿಂದೆ ಮುಳ್ಳು ಹಂದಿಯೂ ಕಾಣಿಸಿಕೊಂಡಿದೆ. ಕಾರಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

‘ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊ ಗಮನಿಸಿದ್ದೇವೆ. ರೇಸ್‌ಕೋರ್ಸ್ ಹಿಂಭಾಗಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ. ಆದರೆ, ಯಾವುದೇ ಚಿರತೆ ಕಂಡುಬಂದಿಲ್ಲ. ಈ ವಿಡಿಯೊವನ್ನು ಯಾವ ಸ್ಥಳದಲ್ಲಿ, ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಖಚಿತವಾಗಿಲ್ಲ. ಚಾಮುಂಡಿಬೆಟ್ಟದಲ್ಲಿ ನಾಲ್ಕು ಚಿರತೆಗಳಿದ್ದು, ಈವರೆಗೆ ಸಾರ್ವಜನಿಕರಿಗೆ ಯಾವುದೇ ತೊಂದರೆ ನೀಡಿಲ್ಲ’ ಎಂದು ಆರ್‌ಎಫ್‌ಒ ದೇವರಾಜ್ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT