ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಣಕಡಲೆಗೆ ಪ್ರೋತ್ಸಾಹಧನ ನೀಡಲು ಮನವಿ

Last Updated 5 ಫೆಬ್ರುವರಿ 2018, 6:52 IST
ಅಕ್ಷರ ಗಾತ್ರ

ರಾಯಚೂರು: ಒಣ ಕಡಲೆ ಖರೀದಿಗೆ ರಾಜ್ಯ ಸರ್ಕಾರದಿಂದಲೂ ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಎಂ.ರೇವಣ್ಣ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ₹4,400 ದರ ನಿಗದಿ ಮಾಡಿದೆ. ರಾಜ್ಯ ಸರ್ಕಾರದಿಂದಲೂ ₹1 ಸಾವಿರ ಪ್ರೋತ್ಸಾಹಧನ ನೀಡಿ ಖರೀದಿಸಬೇಕು. ಖರೀದಿ ಅವಧಿಯನ್ನು ಏಪ್ರಿಲ್‌ವರೆಗೆ ವಿಸ್ತರಣೆ ಮಾಡಬೇಕು. ತೊಗರಿಗೂ ಆನ್‌ಲೈನ್ ಅರ್ಜಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಕೆರೆಗಳ ಹೂಳೆತ್ತುವ ಕಾರ್ಯವನ್ನು ಮಾರ್ಚ್‌ನಿಂದ ಆರಂಭಿಸಬೇಕು. ನಾರಾಯಣಪೂರ ಬಲದಂಡೆ ಕಾಲುವೆ ಆಧುನೀಕರಣ ಕೆಲಸ ಆರಂಭಿಸಬೇಕು. ಬೋಳಮಾನದೊಡ್ಡಿ ಏತ ನೀರಾವರಿ ಜಾರಿಗೊಳಿಸಬೇಕು ಒತ್ತಾಯಿಸಿದರು. ಜಿಲ್ಲಾ ಘಟಕ ಅಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ನರಸಪ್ಪ, ಹುಲಿಗೆಪ್ಪ ಜಾಲಿಬೆಂಚಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT