ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಮಕ್ಕಳಲ್ಲಿ ಅಪಾರವಾದ ಸೃಜನಶೀಲತೆ ಅಡಗಿದೆ: ಜೀವರಾಜ್

Last Updated 5 ಫೆಬ್ರುವರಿ 2018, 10:00 IST
ಅಕ್ಷರ ಗಾತ್ರ

ಶೃಂಗೇರಿ: ಎಲ್ಲ ದಾನಗಳಿಗಿಂತಲೂ ವಿದ್ಯಾದಾನ ಮಹತ್ವವಾದುದು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಸರ್ಕಾರದ ಅನುದಾನಗಳು ನೀಡಿದ್ದರೂ ಅಲ್ಲಿರುವ ಮೂಲಸಮಸ್ಯೆಗಳಿಗೆ ಜನಪ್ರತಿನಿಧಿಗಳೊಂದಿಗೆ ಗ್ರಾಮಸ್ಥರು ಕೈಜೋಡಿಸಬೇಕು ಎಂದು ಶಾಸಕ ಡಿ.ಎನ್.ಜೀವರಾಜ್ ತಿಳಿಸಿದರು.

ಶೃಂಗೇರಿ ತಾಲ್ಲೂಕಿನ ಹೊಳೆಕೊಪ್ಪ ಸರ್ಕಾರಿ ಪ್ರೌಢಶಾಲೆಯ ಸಭಾಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಲೆನಾಡಿನ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಅಪಾರವಾದ ಸೃಜನಶೀಲತೆಯಿದೆ. ಶಿಕ್ಷಣದ ಜತೆಗೆ ಸಾಂಸ್ಕೃತಿಕ, ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕ್ಷೇತ್ರಕ್ಕೆ ಹೆಮ್ಮೆ ತಂದ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಶಾಸಕನಾಗಿ ಸರ್ಕಾರಿ ಶಾಲೆಗಳಿಗೆ ಸಾಕಷ್ಟು ಅನುದಾನ ತರುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇವೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಸ್ಥಳಿಯ ಜನಪ್ರತಿನಿಧಿಗಳ ಜತೆ ಶಿಕ್ಷಕರು ಹಾಗೂ ಪೋಷಕರು ಸಹಕಾರ ನೀಡಬೇಕು. ಆಗ ಮಾತ್ರ ಸರ್ಕಾರಿ ಶಾಲೆಗಳ ಬೆಳವಣಿಗೆ ಸಾಧ್ಯ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಶಿವಶಂಕರ್ ಮಾತನಾಡಿ, ‘ವಿದ್ಯಾರ್ಥಿ ಗಳು ಶಿಕ್ಷಣದ ಜತೆ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು. ದೇಶಪ್ರೇಮ, ಪರಿಸರದ ಉಳಿವಿಗಾಗಿ ನಿರಂತರ ಚಿಂತನೆ ಮಾಡಿದಾಗ ಮಾತ್ರ ಸಮಾಜದಲ್ಲಿ ಸುಸಂಸ್ಕೃತ ವಾತಾವರಣ ಕಾಣಲು ಸಾಧ್ಯ’ ಎಂದರು.

ಅಧ್ಯಕ್ಷತೆಯನ್ನು ತಾಲ್ಲೂಕು ಪಂಚಾ ಯಿತಿ ಅಧ್ಯಕ್ಷೆ ಜಯಶೀಲ ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶಿಲ್ಪಾರವಿ, ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ, ಧರೇಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೇತನ್ ಹೆಗಡೆ, ಸುನಂದಾ ಕೃಷ್ಣ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರವೀಣ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಕವೀಶ್ ಎಚ್.ಆರ್, ಎಸ್.ಡಿ. ಎಂ.ಸಿ ಸದಸ್ಯರು, ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜು ನಾಥ್, ಕೃಷಿಕ ಗೋಪಾಲ್ ಹೆಗಡೆ ಹಾಜರಿದ್ದರು.

ಸಭಾಭವನದ ಮುಖ್ಯದಾನಿಗಳಾದ ಸಂಪತ್‌ಕುಮಾರ್ ಹುಲಗಾರು, ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಹಳಕ ಲಕ್ಷ್ಮೀನಾರಾಯಣಭಟ್ ಹಾಗೂ ಸಭಾಭವನ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರದೀಪ್ ಚೋಳರಮನೆ ಅವರನ್ನು ಶಾಸಕ ಡಿ.ಎನ್.ಜೀವರಾಜ್ ಸನ್ಮಾನಿಸಿದರು. ಎಂದು ಶಾಸಕ ಡಿ.ಎನ್.ಜೀವರಾಜ್ ತಿಳಿಸಿದರು.

ಶೃಂಗೇರಿ ತಾಲ್ಲೂಕಿನ ಹೊಳೆಕೊಪ್ಪ ಸರ್ಕಾರಿ ಪ್ರೌಢಶಾಲೆಯ ಸಭಾಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಲೆನಾಡಿನ ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಅಪಾರವಾದ ಸೃಜನಶೀಲತೆಯಿದೆ. ಶಿಕ್ಷಣದ ಜತೆಗೆ ಸಾಂಸ್ಕೃತಿಕ, ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕ್ಷೇತ್ರಕ್ಕೆ ಹೆಮ್ಮೆ ತಂದ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಶಾಸಕನಾಗಿ ಸರ್ಕಾರಿ ಶಾಲೆಗಳಿಗೆ ಸಾಕಷ್ಟು ಅನುದಾನ ತರುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇವೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಸ್ಥಳಿಯ ಜನಪ್ರತಿನಿಧಿಗಳ ಜತೆ ಶಿಕ್ಷಕರು ಹಾಗೂ ಪೋಷಕರು ಸಹಕಾರ ನೀಡಬೇಕು. ಆಗ ಮಾತ್ರ ಸರ್ಕಾರಿ ಶಾಲೆಗಳ ಬೆಳವಣಿಗೆ ಸಾಧ್ಯ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಶಿವಶಂಕರ್ ಮಾತನಾಡಿ, ‘ವಿದ್ಯಾರ್ಥಿ ಗಳು ಶಿಕ್ಷಣದ ಜತೆ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು. ದೇಶಪ್ರೇಮ, ಪರಿಸರದ ಉಳಿವಿಗಾಗಿ ನಿರಂತರ ಚಿಂತನೆ ಮಾಡಿದಾಗ ಮಾತ್ರ ಸಮಾಜದಲ್ಲಿ ಸುಸಂಸ್ಕೃತ ವಾತಾವರಣ ಕಾಣಲು ಸಾಧ್ಯ’ ಎಂದರು.

ಅಧ್ಯಕ್ಷತೆಯನ್ನು ತಾಲ್ಲೂಕು ಪಂಚಾ ಯಿತಿ ಅಧ್ಯಕ್ಷೆ ಜಯಶೀಲ ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶಿಲ್ಪಾರವಿ, ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ, ಧರೇಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೇತನ್ ಹೆಗಡೆ, ಸುನಂದಾ ಕೃಷ್ಣ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರವೀಣ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಕವೀಶ್ ಎಚ್.ಆರ್, ಎಸ್.ಡಿ. ಎಂ.ಸಿ ಸದಸ್ಯರು, ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜು ನಾಥ್, ಕೃಷಿಕ ಗೋಪಾಲ್ ಹೆಗಡೆ ಹಾಜರಿದ್ದರು.

ಸಭಾಭವನದ ಮುಖ್ಯದಾನಿಗಳಾದ ಸಂಪತ್‌ಕುಮಾರ್ ಹುಲಗಾರು, ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಹಳಕ ಲಕ್ಷ್ಮೀನಾರಾಯಣಭಟ್ ಹಾಗೂ ಸಭಾಭವನ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರದೀಪ್ ಚೋಳರಮನೆ ಅವರನ್ನು ಶಾಸಕ ಡಿ.ಎನ್.ಜೀವರಾಜ್ ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT