ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಪ್ರಗತಿಗೆ ವಾರ್ಷಿಕೋತ್ಸವ ಪ್ರೇರಣೆ

Last Updated 6 ಫೆಬ್ರುವರಿ 2018, 9:31 IST
ಅಕ್ಷರ ಗಾತ್ರ

ಗುಡಿಬಂಡೆ: 'ಮಕ್ಕಳ ಪ್ರತಿಭೆ ಹೊರ ತರಲು ಶಾಲಾ ವಾರ್ಷಿಕೋತ್ಸವ ಸಹಕಾರಿಯಾಗಿದೆ' ಎಂದು ಚಿಕ್ಕಬಳ್ಳಾಪುರ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನರಸಿಂಹಮೂರ್ತಿ ತಿಳಿಸಿದರು.

ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರೇಸಂದ್ರ ಗ್ರಾಮದ ಆಂಜನಾದ್ರಿ ಕಾಲೇಜಿನಲ್ಲಿ ಇತ್ತೀಚೆಗೆ ಅಯೋಜಿಸಿದ್ದ ಸಾಧನ ಸಂಭ್ರಮ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವರ್ಷವಿಡಿ ಪಾಠದ ಕಡೆ ಗಮನ ಹರಿಸುತ್ತಿದ್ದ ಮಕ್ಕಳ ಮನಸುಗಳಿಗೆ ವಾರ್ಷಿಕೋತ್ಸವ ಉಲ್ಲಾಸ ನೀಡಿ ಅವರ ಶೈಕ್ಷಣಿಕ ಪ್ರಗತಿಗೆ ಪ್ರೇರಣೆಯಾಗುತ್ತದೆ. ಮಕ್ಕಳ ಮನಸ್ಸಿನಲ್ಲಿ ಸ್ತಬ್ಧವಾದ ಕಲೆ ಮತ್ತು ಸಾಂಸ್ಕೃತಿಕವಾಗಿ ವಿಭಿನ್ನ ಕಲೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದರು.

ಮಕ್ಕಳನ್ನು ದೇಶದ ಒಳ್ಳೆಯ ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮತ್ತು ಪೋಷಕರ ಮೇಲಿದೆ. ಪಾಲಕರು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮಾತ್ರವಲ್ಲ ಮನೆಯಲ್ಲಿ ಸಹ ಅವರ ಬಗ್ಗೆ ಕಾಳಜಿ ವಹಿಸಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಯಾವ ವಿಷಯದಲ್ಲಿ ಆಸಕ್ತಿ ಇದೆ ಎಂಬುದನ್ನು ಅರಿತು ಅವರಿಗೆ ಅದನ್ನು ಕಲಿಯಲು ಸ್ವಾತಂತ್ರ್ಯ ನೀಡಬೇಕು ಎಂದು ಸಲಹೆ ನೀಡಿದರು.

ಪೋಷಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರಿದಾಗ ಅವರ ಕಲಿಕೆಯ ಮೇಲೆ ದುಷ್ಪರಿಣಾಮ ಉಂಟಾಗುತ್ತವೆ. ಹೀಗಾಗಿ ವಿದ್ಯಾರ್ಥಿ ದೆಸೆಯಲ್ಲಿರುವ ಮಕ್ಕಳ ಮೇಲೆ ಪೋಷಕರು ಹೆಚ್ಚಿನ ಗಮನ ಹರಿಸುವುದು ಅಗತ್ಯ. ಪೋಷಕರು ತಮ್ಮ ಮಕ್ಕಳಿಗಾಗಿ ಆಸ್ತಿ ಮಾಡದೇ ಅವರನ್ನೇ ರಾಷ್ಟ್ರದ ಆಸ್ತಿಯನ್ನಾಗಿ ರೂಪಿಸಬೇಕು. ಅಲ್ಲದೇ ಶಿಕ್ಷಣ ಸಂಸ್ಥೆಗಳು ಕೂಡ ಶಿಕ್ಷಣದ ಜತೆಗೆ ನಮ್ಮ ದೇಶದ ಸಂಸ್ಕೃತಿ ಕಲಿಸಿಕೊಡಬೇಕು’ ಎಂದು ತಿಳಿಸಿದರು.

ದೇವನಹಳ್ಳಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಪ್ಪ ಮಾತನಾಡಿ, 'ವಿದ್ಯಾರ್ಥಿ ಜೀವನ ಮನುಷ್ಯನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುವ ಕಾಲಘಟ್ಟ. ಗುಣಮಟ್ಟದ ಶಿಕ್ಷಣದಿಂದ ಮಾತ್ರ ಉತ್ತಮ ಪ್ರಜೆಗಳು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.

ಆಂಜನಾದ್ರಿ ಕಾಲೇಜಿನ ಸಂಸ್ಥಾಪಕದ ಅಧ್ಯಕ್ಷ ಸುನೀಲ್ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪೋತ್ಸಹ ಧನ ವಿತರಿಸಿದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೋರೆಗೊಂಡವು.

ನ್ಯಾಯಾಧೀಶ ದೇವರಾಜು, ಚಿಕ್ಕಬಳ್ಳಾಪುರ ವಕೀಲ ಸಂಘದ ಅಧ್ಯಕ್ಷ ತಮ್ಮೇಗೌಡ, ಬಾಗೇಪಲ್ಲಿ ಕೈಗಾರಿಕ ವಿಸ್ತರಣಾಧಿಕಾರಿ ಮಹಬೂಬ್ ಪಾಷಾ, ಆಂಜನಾದ್ರಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಸುನೀಲ್, ಆಂಜನಾದ್ರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮುನಿರಾಜು, ಆಂಜನಾದ್ರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜಪ್ಪ, ಆಂಜನಾದ್ರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT