ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು ನಗರಸಭೆ: ಫಲಾನುಭವಿಗಳಿಗೆ ಸವಲತ್ತು ವಿತರಣೆ

Last Updated 7 ಫೆಬ್ರುವರಿ 2018, 10:09 IST
ಅಕ್ಷರ ಗಾತ್ರ

ಹಿರಿಯೂರು: ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 2017–18ನೇ ಸಾಲಿನ ಎಸ್‌ಎಫ್‌ಸಿ ಮತ್ತು ನಗರಸಭೆ ನಿಧಿ ಯೋಜನೆಯಡಿ ಫಲಾನುಭವಿಗಳಿಗೆ ನಗರಸಭಾಧ್ಯಕ್ಷ ಟಿ.ಚಂದ್ರಶೇಖರ್ ಸವಲತ್ತುಗಳನ್ನು ವಿತರಿಸಿದರು.

‘ನಗರಸಭೆ ನಿಧಿ ಶೇ 24.10, ಶೇ 7.25 ಮತ್ತು ಶೇ 3ರ ಯೋಜನೆಗಳಲ್ಲಿ ಗ್ಯಾಸ್ ಸ್ಟೌ ಮತ್ತು ಸಿಲಿಂಡರ್, 10 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳು, ಪೌರಕಾರ್ಮಿಕರಿಗೆ ₹ 2.50 ಲಕ್ಷ ವೆಚ್ಚದಲ್ಲಿ ಸಮವಸ್ತ್ರ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಉನ್ನತ ತರಗತಿಗಳಲ್ಲಿ ಹೆಚ್ಚು ಅಂಕ ಗಳಿಸಲು ಲ್ಯಾಪ್‌ಟಾಪ್ ಹಾಗೂ ಪ್ರೋತ್ಸಾಹಧನವನ್ನು ಬಳಸಿಕೊಳ್ಳಬೇಕು’ ಎಂದು ನಗರಸಭಾಧ್ಯಕ್ಷರು ಸಲಹೆ ನೀಡಿದರು.

‘ಪರಿಶಿಷ್ಟ ಜಾತಿ–ಪಂಗಡದ ಬಹುತೇಕ ಕುಟುಂಬಗಳನ್ನು ಹೊಗೆಮುಕ್ತವಾಗಿಸಲು ಗ್ಯಾಸ್ ವಿತರಣೆ ಮಾಡಲಾಗಿದೆ. ಸ್ಟೌಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡಲ್ಲಿ ದೀರ್ಘಕಾಲ ಬಾಳಿಕೆ ಬರುತ್ತವೆ. ಕೆಲವೇ ದಿನಗಳಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರ ನೀಡುತ್ತೇವೆ. ಅದಕ್ಕೂ ಮೊದಲು ನಗರಸಭಾ ಕಲ್ಯಾಣ ಮಂಟಪದಲ್ಲಿ ಹೊಲಿಗೆ ತರಬೇತಿ ನೀಡಲಾಗುತ್ತದೆ’ ಎಂದು ಚಂದ್ರಶೇಖರ್ ಹೇಳಿದರು.

ಸದಸ್ಯ ರವಿಚಂದ್ರನಾಯ್ಕ್ ಮಾತನಾಡಿ, ‘ಪರಿಶಿಷ್ಟ ಜಾತಿ–ಪಂಗಡದವರಿಗೆ ₹ 15 ಸಾವಿರ, ಇತರರಿಗೆ ₹ 10 ಸಾವಿರವನ್ನು ಶೌಚಾಲಯ ನಿರ್ಮಾಣಕ್ಕೆ ನೀಡುತ್ತಿದ್ದು, ಪ್ರತಿಯೊಬ್ಬರೂ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು. ಸದಸ್ಯ ಜಿ. ಪ್ರೇಮ್ ಕುಮಾರ್ ಮಾತನಾಡಿದರು.

ಉಪಾಧ್ಯಕ್ಷೆ ಇಮ್ರಾನ್ ಬಾನು, ಹಿರಿಯ ಸದಸ್ಯ ಇ.ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಜಬೀವುಲ್ಲಾ, ಎಚ್. ನಟರಾಜ್, ಜಯರಾಜ್, ವನಿತಾ, ಮಂಜುಳಾ, ಲಕ್ಷ್ಮೀದೇವಿ, ಪುಷ್ಪಲತಾ, ಸೈಯಿದಾ ಫಿರ್ದೋಸ್, ಲತಾ, ಪೌರಾಯುಕ್ತ ರಮೇಶ್ ಸುಣಗಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT