ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೆನೆಪೋಯ ವಿ.ವಿ: ಸೌರ ಫಲಕ ಉದ್ಘಾಟನೆ

Last Updated 28 ಜೂನ್ 2018, 19:50 IST
ಅಕ್ಷರ ಗಾತ್ರ

ಉಳ್ಳಾಲ: ಪರಿಸರ ಸ್ನೇಹಿ ಉದ್ದೇಶದಿಂದ ಯೆನೆಪೋಯ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಶೇ 20 ರಷ್ಟು ವಿದ್ಯುತ್ ಉಳಿಸುವ ಸಲುವಾಗಿ 498 ಕಿಲೋ ವಾಟ್‌ ವಿದ್ಯುತ್ ಉತ್ಪಾದಿಸುವ ಸೌರ ಫಲಕವನ್ನು ಅಳವಡಿಸಲಾಗಿದೆ ಎಂದು ದೇರಳಕಟ್ಟೆ ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ..ಎಂ ವಿಜಯಕುಮಾರ್ ಹೇಳಿದರು.

ಅವರು ಯೆನೆಪೋಯ ಕ್ಯಾಂಪಸ್‌ನಲ್ಲಿ ಅಳವಡಿಸಲಾದ ಸೌರ ಫಲಕದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸೌರ ಫಲಕದ ಅಳವಡಿಕೆಯಿಂದಾಗಿ ಕ್ಯಾಂಪಸ್‌ನಲ್ಲಿ ಶೇ 20 ರಷ್ಟು ವಿದ್ಯುತ್ ಉಳಿಸಲು ಸಾಧ್ಯ. ಪರಿಸರ ಸ್ನೇಹಿಯಾಗಿ ಬೆಳೆಯುತ್ತಿರುವ ವಿಶ್ವವಿದ್ಯಾಲಯಕ್ಕೆ ಇದೊಂದು ಹಿರಿಮೆ ತಂದಿದೆ.

ಸದ್ಯ ಅಳವಡಿಸಿರುವ ಸೌರ ಫಲಕದಿಂದ 498 ಕಿಲೋ ವಾಟ್‌ ವಿದ್ಯುತ್ ಉತ್ಪಾದನೆಯಾಗಲಿದೆ. ಬರುವ ದಿನಗಳಲ್ಲಿ ಶೇ 100 ರಷ್ಟು ವಿದ್ಯುತ್ ಸೌರಶಕ್ತಿಯಿಂದಲೇ ದೊರೆಯುವಂತಹ ಪ್ರಯತ್ನವನ್ನು ಮುಂದುವರಿಸಲಾಗುವುದು ಎಂದರು.

ಯೆನೆಪೋಯ ವಿ.ವಿ ಹಣಕಾಸು ವಿಭಾಗದ ನಿರ್ದೇಶಕ ಫರ್ಹಾದ್ ಯೆನೆಪೋಯ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಶ್ರೀಕುಮಾರ್ ಮೆನನ್, ಹಣಕಾಸು ಅಧಿಕಾರಿ ಮಹಮ್ಮದ್ ಬಾವಾ.ಪಿ, ದಂತ ವೈದ್ಯಕೀಯ ಕಾಲೇಜಿನ ಡೀನ್ ಡಾ.ಬಿ. ಎಚ್.ಶ್ರೀಪತಿ ರಾವ್, ವೈದ್ಯಕೀಯ ಕಾಲೇಜಿನ ಡೀನ್ ಡಾ. ಮೂಸಬ್ಬ, ಅಲೈಡ್ ಹೆಲ್ತ್ ಆಂಡ್ ಬೇಸಿಕ್ ಸೈನ್ಸಸ್ ವಿಭಾಗದ ಡೀನ್ ಪ್ರೊ.ಪದ್ಮ ಕುಮಾರ್, ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ, ಇಸ್ಲಾಮಿಕ್ ಅಧ್ಯಯನಗಳ ನಿರ್ದೇಶಕ ಡಾ. ಜಾವೇದ್ ಜಾಮಿಲ್, ಯೆನೆಪೋಯ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಅರುಣ್ ಭಾಗವತ್, ಕಣ್ಣೂರು ಮತ್ತು ಕಲ್ಲಿಕೋಟೆ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT