ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಯೂಟ ಕಾರ್ಯಕರ್ತೆಯರಿಂದ ವಿಧಾನಸೌಧ ಚಲೋ

Last Updated 8 ಫೆಬ್ರುವರಿ 2018, 6:46 IST
ಅಕ್ಷರ ಗಾತ್ರ

ಬೆಂಗಳೂರು: ಕನಿಷ್ಟ ವೇತನ ಜಾರಿಗೊಳಿಸಿ ಎಂದು ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ನಗರದಲ್ಲಿ ಗುರುವಾರ ವಿಧಾನಸೌಧ ಚಲೋ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣದಿಂದ ಹೊರಟ ಸಾವಿರಾರು ಕಾರ್ಯಕರ್ತೆಯರ ಆನಂದ್ ರಾವ್ ಮೇಲ್ಸೇತುವೆ ಮಾರ್ಗವಾಗಿ ವಿಧಾನಸೌಧದತ್ತ ಹೆಜ್ಜೆ ಹಾಕುತ್ತಿದ್ದಾರೆ.

ಕನಿಷ್ಠ ವೇತನ ಸೌಲಭ್ಯ ಒದಗಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಉದ್ಯಾನದ ಬಳಿ ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರು ವಿಧಾನಸೌಧ ಚಲೋ ಮೆರವಣಿಗೆ ಕೂಡಿಕೊಳ್ಳುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT