ರಾಮನಗರ

ಅತ್ಯಾಚಾರ ಪ್ರಕರಣ: ವಿಚಾರಣೆಗೆ ನಿತ್ಯಾನಂದ ಸ್ವಾಮೀಜಿ ಹಾಜರು

ಬೆಳಿಗ್ಗೆ 10ರ ಸುಮಾರಿಗೆ ಸ್ವಾಮೀಜಿ ನ್ಯಾಯಾಲಯಕ್ಕೆ ಹಾಜರಾಗಿದ್ದು, ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಚಾರಣೆ ಆರಂಭವಾಯಿತು. ನಿತ್ಯಾನಂದ ಪರ ವಕೀಲ ಸಿ.ವಿ. ನಾಗೇಶ್‌ ವಾದ ಮಂಡಿಸಿದರು. ಆದರೆ ಅವರ ಪರ ಇನ್ನಿಬ್ಬರು ವಕೀಲರು ಗೈರಾಗಿದ್ದರು. ಹೀಗಾಗಿ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ವಿಚಾರಣೆಯನ್ನು ಇದೇ 17ಕ್ಕೆ ಮುಂದೂಡಿದರು.

ರಾಮನಗರ: ಅತ್ಯಾಚಾರ ಪ್ರಕರಣದ ವಿಚಾರಣೆಯ ಸಲುವಾಗಿ ಬಿಡದಿಯ ನಿತ್ಯಾನಂದ ಆಶ್ರಮದ ನಿತ್ಯಾನಂದ ಸ್ವಾಮೀಜಿ ಮತ್ತು ಅವರ ಆರು ಶಿಷ್ಯರು ಸೋಮವಾರ ಇಲ್ಲಿನ ಮೂರನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರಾದರು.

ಬೆಳಿಗ್ಗೆ 10ರ ಸುಮಾರಿಗೆ ಸ್ವಾಮೀಜಿ ನ್ಯಾಯಾಲಯಕ್ಕೆ ಹಾಜರಾಗಿದ್ದು, ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಚಾರಣೆ ಆರಂಭವಾಯಿತು. ನಿತ್ಯಾನಂದ ಪರ ವಕೀಲ ಸಿ.ವಿ. ನಾಗೇಶ್‌ ವಾದ ಮಂಡಿಸಿದರು. ಆದರೆ ಅವರ ಪರ ಇನ್ನಿಬ್ಬರು ವಕೀಲರು ಗೈರಾಗಿದ್ದರು. ಹೀಗಾಗಿ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ವಿಚಾರಣೆಯನ್ನು ಇದೇ 17ಕ್ಕೆ ಮುಂದೂಡಿದರು.

ಸಿಐಡಿ ಪರ ವಕೀಲ ವಡವಡಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ‘ಆರೋಪಿ ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ದಾಖಲೆಗಳನ್ನು ಇಲ್ಲಿನ ನ್ಯಾಯಾಲಯವು ಮಾನ್ಯ ಮಾಡಿರಲಿಲ್ಲ. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲಿ ಅವರಿಗೆ ಜಯ ಸಿಕ್ಕಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಕಳೆದ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಅಲ್ಲಿನ ನ್ಯಾಯಮೂರ್ತಿ ಪ್ರಕರಣದ ವಿಚಾರಣೆ ನಡೆಸಿ, ದಾಖಲೆಗಳನ್ನು ಪರಿಗಣಿಸುವ ವಿವೇಚನೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಬಿಟ್ಟಿದ್ದರು. ತ್ವರಿತಗತಿಯಲ್ಲಿ ವಿಚಾರಣೆಯನ್ನು ಮುಂದುವರಿಸುವಂತೆ ಸೂಚಿಸಿದ್ದರು. ಸೋಮವಾರ ದಾಖಲೆಗಳ ಸಲ್ಲಿಕೆ ಸಂಬಂಧ ವಿಚಾರಣೆ ಇತ್ತು. ಆರೋಪಿ ಪರ ಕೆಲ ವಕೀಲರು ನ್ಯಾಯಾಲಯಕ್ಕೆ ಬಾರದ ಕಾರಣ ವಿಚಾರಣೆಯನ್ನು ನ್ಯಾಯಾಧೀಶರು ಮುಂದೂಡಿದರು’ ಎಂದು ತಿಳಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
ಬಿಬಿಎಂಪಿ ಕಚೇರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚುವ ಬೆದರಿಕೆ: ಕಾಂಗ್ರೆಸ್‌ನಿಂದ ಮುಖಂಡ ನಾರಾಯಣಸ್ವಾಮಿ ಉಚ್ಛಾಟನೆ

ಬೆಂಗಳೂರು
ಬಿಬಿಎಂಪಿ ಕಚೇರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚುವ ಬೆದರಿಕೆ: ಕಾಂಗ್ರೆಸ್‌ನಿಂದ ಮುಖಂಡ ನಾರಾಯಣಸ್ವಾಮಿ ಉಚ್ಛಾಟನೆ

20 Feb, 2018
ಶಾಸಕ ಹ್ಯಾರಿಸ್ ಪುತ್ರ ಶರಣಾಗತಿ

ಹಲ್ಲೆ ಪ್ರಕರಣ
ಶಾಸಕ ಹ್ಯಾರಿಸ್ ಪುತ್ರ ಶರಣಾಗತಿ

20 Feb, 2018
ದೋಬಿ ಘಾಟ್‌ ಉದ್ಘಾಟನೆ

ಬೆಂಗಳೂರು
ದೋಬಿ ಘಾಟ್‌ ಉದ್ಘಾಟನೆ

20 Feb, 2018
ಶಿಶು ಹೃದಯ ಬಡಿತ ತಪಾಸಣೆಗೆ ಉಪಕರಣ

ಬೆಂಗಳೂರು
ಶಿಶು ಹೃದಯ ಬಡಿತ ತಪಾಸಣೆಗೆ ಉಪಕರಣ

20 Feb, 2018
ಪರಿಶಿಷ್ಟರಿಗೆ ನಿವೇಶನ ಹಂಚಿಕೆ: ಗದ್ದಲ

ಬೆಂಗಳೂರು
ಪರಿಶಿಷ್ಟರಿಗೆ ನಿವೇಶನ ಹಂಚಿಕೆ: ಗದ್ದಲ

20 Feb, 2018