ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

58 ವಾರ್ಡ್‌ಗಳಲ್ಲಿ ಮಹಿಳಾ ಮೀಸಲು 28

ನಗರಪಾಲಿಕೆ: ಕರಡು ಪಟ್ಟಿ ಪ್ರಕಟ, ಆಕ್ಷೇಪಣೆಗೆ ಅವಕಾಶ
Last Updated 6 ಜುಲೈ 2018, 14:18 IST
ಅಕ್ಷರ ಗಾತ್ರ

ಬೆಳಗಾವಿ: ನಗರಪಾಲಿಕೆಯ 58 ವಾರ್ಡ್‌ಗಳ ಮೀಸಲಾತಿ ನಿಗದಿಪಡಿಸಿ, ನಗರಾಭಿವೃದ್ಧಿ ಇಲಾಖೆಯು ಕರಡು ಪಟ್ಟಿ ಪ್ರಕಟಿಸಿದೆ.

ಈಚೆಗಷ್ಟೇ ವಾರ್ಡ್‌ಗಳಲ್ಲಿನ ಕ್ಷೇತ್ರಗಳ ಪುನರ್ ವಿಂಗಡಣೆ ಪ್ರಕ್ರಿಯೆ ನಡೆಸಲಾಗಿದೆ. ವಾರ್ಡ್‌ವಾರು ಮೀಸಲಾತಿ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ 7 ದಿನಗಳ ಒಳಗೆ ಲಿಖಿತವಾಗಿ, ಕಾರಣಸಹಿತ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

2011ರ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳ ಪುನರ್‌ವಿಂಗಡಣೆ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 16, ಹಿಂದುಳಿದ ವರ್ಗ ‘ಎ‘ಗೆ 15, ಹಿಂದುಳಿದ ವರ್ಗ ‘ಬಿ’ಗೆ 4,ಪರಿಶಿಷ್ಟ ಜಾತಿಗೆ 5, ಪರಿಶಿಷ್ಟ ಪಂಗಡಕ್ಕೆ 2 ಸ್ಥಾನಗಳನ್ನು ಮೀಸಲಿಡಲಾಗಿದೆ.

58 ವಾರ್ಡ್‌ಗಳಲ್ಲಿ 28 ವಾರ್ಡ್‌ಗಳು ಮಹಿಳೆಯರಿಗೆ ಮೀಸಲಾಗಿವೆ. ಈ ಪೈಕಿ 16 ಸ್ಥಾನಗಳು ಸಾಮಾನ್ಯ ವರ್ಗದ ಮಹಿಳೆಯರಿಗೆ ಮೀಸಲಾಗಿವೆ! ಪರಿಶಿಷ್ಟ ಜಾತಿ ಮಹಿಳೆ– 2, ಪರಿಶಿಷ್ಟ ಪಂಗಡ ಮಹಿಳೆಗೆ ಒಂದು ಸ್ಥಾನ ನಿಗದಿಪಡಿಸಲಾಗಿದೆ.

ಹಾಲಿ ಸದಸ್ಯರ ಅಧಿಕಾರದ ಅವಧಿ ಆರು ತಿಂಗಳು ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT