ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂತ ಹಂತವಾಗಿ ತೈಲ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ

ಹಣಕಾಸು ಕಾರ್ಯದರ್ಶಿ ಹಸ್ಮುಖ್‌ ಆಧಿಯಾ ಹೇಳಿಕೆ
Last Updated 6 ಜುಲೈ 2018, 20:13 IST
ಅಕ್ಷರ ಗಾತ್ರ

ನವದೆಹಲಿ: ‘ಪೆಟ್ರೋಲಿಯಂ ಉತ್ಪನ್ನಗಳುಹಂತ ಹಂತವಾಗಿ ಜಿಎಸ್‌ಟಿ ವ್ಯಾಪ್ತಿಗೆ ಬರಲಿವೆ’ ಎಂದು ಹಣಕಾಸು ಕಾರ್ಯದರ್ಶಿ ಹಸ್ಮುಖ್‌ ಆಧಿಯಾ ಹೇಳಿದ್ದಾರೆ.

‘ನೈಸರ್ಗಿಕ ಅನಿಲ ಮತ್ತು ವಿಮಾನ ಇಂಧನವನ್ನೂ ಜಿಎಸ್‌ಟಿಗೆ ತರುವ ಉದ್ದೇಶವನ್ನು ಹಣಕಾಸು ಸಚಿವಾಲಯ ಹೊಂದಿದೆ.

‘ವ್ಯವಸ್ಥೆ ಸುಧಾರಣೆಗೆಈಗಾಗಲೇ ನಾವು ಬಹಳಷ್ಟನ್ನು ಮಾಡಿದ್ದೇವೆ. ಹಾಗೆಂದ ಮಾತ್ರಕ್ಕೆ ಇನ್ನಷ್ಟು ಉತ್ತಮಗೊಳಿಸಲು ಅವಕಾಶವೇ ಇಲ್ಲ ಎಂದಲ್ಲ. ಇನ್ನೂ ಬಹಳಷ್ಟನ್ನು ಸಾಧಿಸಬೇಕಾಗಿದೆ. ಆ ದಿಕ್ಕಿನಲ್ಲಿ ಕಾರ್ಯೋನ್ಮುಖವಾಗಿದ್ದೇವೆ.

‘ಜಿಎಸ್‌ಟಿ ಜಾರಿಗೆ ಬಂದ ದಿನದಿಂದಲೇಮರು ಪಾವತಿ ವ್ಯವಸ್ಥೆಯನ್ನು ಸ್ವಯಂಚಾಲಿತಗೊಳ್ಳಬೇಕು. ಆದರೆ, ರಿಟರ್ನ್‌ ಸಲ್ಲಿಸುವಲ್ಲಿ ತಪ್ಪು ಮಾಡಿರುವುದರಿಂದ ಸಿಬ್ಬಂದಿಯೇ ನಿರ್ವಹಣೆ ಮಾಡಬೇಕಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT