ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಫ್ಗಾನಿಸ್ತಾನದ ವೈಫಲ್ಯಕ್ಕೆ ಪಾಕ್‌ ದೂಷಿಸಬೇಡಿ’

Last Updated 18 ಫೆಬ್ರುವರಿ 2018, 19:33 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌(ಪಿಟಿಐ): ‘ಭಯೋತ್ಪಾದಕರಿಗೆ ಪಾಕಿಸ್ತಾನ ಸುರಕ್ಷಿತ ತಾಣವಲ್ಲ. ಅಫ್ಗಾನಿಸ್ತಾನದಲ್ಲಿ ಉಗ್ರರನ್ನು ನಿಯಂತ್ರಿಸಲು ವಿಫಲವಾಗಿರುವುದಕ್ಕೆ ನಮ್ಮನ್ನು ದೂಷಿಸುವುದನ್ನು ಅಮೆರಿಕ ನಿಲ್ಲಿಸಲಿ’ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್‌ ಖಮರ್‌ ಬಾಜ್ವಾ ಹೇಳಿದ್ದಾರೆ.

ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಮೂರು ದಿನಗಳ ಭದ್ರತಾ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಮ್ಮ ದೇಶದ ಮಣ್ಣಿನಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದಿಲ್ಲ. ಗಡಿ ಪ್ರದೇಶದಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ’ ಎಂದರು.

‘ಅಫ್ಗಾನಿಸ್ತಾನದಲ್ಲಿ ನೆಲೆಸಿರುವ ಉಗ್ರರು ಪಾಕಿಸ್ತಾನದಲ್ಲಿ ದಾಳಿ ನಡೆಸುತ್ತಿದ್ದಾರೆ’ ಎಂದಿರುವ  ಬಾಜ್ವಾ, ಪಾಕಿಸ್ತಾನದಲ್ಲಿ ನೆಲೆಸಿರುವ ಸುಮಾರು 20 ಲಕ್ಷಕ್ಕೂ ಹೆಚ್ಚು ನಿರಾಶ್ರಿತರನ್ನು ಮರಳಿ ಅಫ್ಗಾನಿಸ್ತಾನಕ್ಕೆ ಕಳುಹಿಸುವ ಆಶಯವನ್ನೂ ವ್ಯಕ್ತಪಡಿಸಿದ್ದಾರೆ.

‘ಜಮಾತ್‌ ಉಲ್‌ ಅಹ್ರಾರ್‌, ಪಾಕಿಸ್ತಾನದ ತೆಹ್ರಿಕ್‌ ಎ ತಾಲಿಬಾನ್‌ ಮತ್ತು ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರ ಸಂಘಟನೆಗಳಿಗೆ ಅಫ್ಗಾನಿಸ್ತಾನ ಸುರಕ್ಷಿತ ನೆಲೆಯಾಗಿದೆ’ ಎಂದೂ ಅವರು ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ಹೋರಾಡಲು ಅಂತರರಾಷ್ಟ್ರೀಯ ಮಟ್ಟದ ಸಹಕಾರ ಅಗತ್ಯ ಎಂದೂ ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT