ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ಟಿಎಂಸಿಗೂ ಹೆಚ್ಚು ನೀರು ಸಿಗಬೇಕಿತ್ತು: ದೇವೇಗೌಡ

ಕಾವೇರಿ ತೀರ್ಪು ಪೂರ್ಣ ತೃಪ್ತಿ ತಂದಿಲ್ಲ
Last Updated 20 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ‘ಕಾವೇರಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ನ್ಯಾಯಯುತವಾಗಿ 40 ಟಿಎಂಸಿ ಅಡಿಗಳಿಗೂ ಹೆಚ್ಚು ನೀರು ಲಭಿಸಬೇಕಿತ್ತು’ ಎಂದು ಸಂಸದ ಎಚ್‌.ಡಿ.ದೇವೇಗೌಡ ಮಂಗಳವಾರ ಅಭಿಪ್ರಾಯಪಟ್ಟರು.

ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿ ಎ.ಕಾಳೇನಹಳ್ಳಿಯಲ್ಲಿ ಜೀರ್ಣೋದ್ಧಾರಗೊಂಡ ಆಂಜನೇಯಸ್ವಾಮಿ ದೇಗುಲ ಉದ್ಘಾಟಿಸಿ ಮಾತನಾಡಿದರು.

‘ಸುಪ್ರೀಂ ಕೋರ್ಟ್‌ ನೀಡಿರುವ ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ. ನಮ್ಮ ಜನರಿಗೆ ಆಗಿರುವ ಅನ್ಯಾಯದ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು’ ಎಂದರು.

‘ತಮಿಳುನಾಡಿಗೆ ನಾವು ಮೋಸ ಮಾಡಿಲ್ಲ. ಕಾವೇರಿ ನೀರು ಹಂಚಿಕೆ ಕುರಿತು ಅವರು ತಕರಾರು ಮಾಡಿದರೆ ಪ್ರತಿರೋಧ ತೋರಲು ನಮ್ಮಲ್ಲೂ ಅಸ್ತ್ರಗಳಿವೆ’ ಎಂದರು.

‘ಈಗ ಕೇವಲ 14.50 ಟಿಎಂಸಿ ನೀರು ಹೆಚ್ಚುವರಿಯಾಗಿ ಸಿಕ್ಕಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಇವರಿಗೆ ಏನಾದರೂ ವಿವೇಚನೆ ಇದೆಯೆ? ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT