ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕ ಅನುಚಿತ ವರ್ತನೆ: ವಿಡಿಯೊ ವೈರಲ್

Last Updated 22 ಫೆಬ್ರುವರಿ 2018, 20:01 IST
ಅಕ್ಷರ ಗಾತ್ರ

ಬೆಂಗಳೂರು: ಮನೆ ಬಾಗಿಲು ಬಡಿದು ಯುವಕನೊಬ್ಬ ಅನುಚಿತವಾಗಿ ವರ್ತಿಸುತ್ತಿದ್ದ ವಿಡಿಯೊ ವೈರಲ್ ಆಗಿದೆ.

ಈ ಸಂಬಂಧ ಚಿಕ್ಕಬೊಮ್ಮಸಂದ್ರದ ಆದಿ (20) ಎಂಬಾತನನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಡಿಪ್ಲೊಮಾ ವಿದ್ಯಾರ್ಥಿಯಾದ ಆತ, ವಿದ್ಯಾರ್ಥಿನಿಯರನ್ನು ಅಡ್ಡಗಟ್ಟಿ ಚುಡಾಯಿಸುತ್ತಿದ್ದ. ಈ ಬಗ್ಗೆ ಎಚ್ಚರಿಕೆ ನೀಡಿದ್ದರೂ ಹಳೆ ಚಾಳಿ ಮುಂದುವರಿಸಿದ್ದ ಎಂದು ದೂರುದಾರ ವ್ಯಕ್ತಿ ತಿಳಿಸಿದರು.

‘ಯುವ‌ತಿಯರು ಹಾಗೂ ಮಹಿಳೆಯರು ಒಂಟಿಯಾಗಿ ಇರುವ ವೇಳೆ ಅವರ ಮನೆಗಳ ಬಾಗಿಲು ಬಡಿಯುತ್ತಿದ್ದ. ನನ್ನ ಮನೆಗೂ ಬಂದು ಅದೇ ರೀತಿ ತೊಂದರೆ ಕೊಟ್ಟಿದ್ದ. ಆ ಬಗ್ಗೆ ಪ್ರಶ್ನಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ದೂರು ಕೊಟ್ಟಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT