ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಅಧಿಕಾರಿಗಳ ದಾಳಿ; ಒಂದು ಟನ್ ಪ್ಲಾಸ್ಟಿಕ್ ವಶ

Last Updated 11 ಜುಲೈ 2018, 14:39 IST
ಅಕ್ಷರ ಗಾತ್ರ

ತುಮಕೂರು: ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಅಧಿಕಾರಿಗಳು ನಗರದ ಮೂರು ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿ ಅಂದಾಜು ಒಂದು ಲಕ್ಷ ಮೊತ್ತದ ಒಂದು ಟನ್ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಡಿಪೇಟೆಯ ಪಟೇಲ್ ಪ್ಲಾಸ್ಟಿಕ್ಸ್‌, ಹಿಂದುಸ್ತಾನ್ ಪ್ಲಾಸ್ಟಿಕ್ ಮತ್ತು ಮಾರುತಿ ಟ್ರೇಡರ್ಸ್‌ ಮಳಿಗೆಗಳ ಮೇಲೆ ದಾಳಿ ನಡೆಸಿದಾಗ ಒಂದು ಟನ್‌ ನಷ್ಟು ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿತು. ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಪೋರ್ಕ್, ಪಾಲಿ ಬ್ಯಾಗ್‌ಗಳು ವಶಪಡಿಸಿಕೊಂಡ ಪ್ಲಾಸ್ಟಿಕ್‌ ನಲ್ಲಿದ್ದವು.

ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥಸ್ವಾಮಿ ಮಾರ್ಗದರ್ಶನದಲ್ಲಿ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ನಾಗೇಶ್‌ಕುಮಾರ್, ಪರಿಸರ ಎಂಜಿನಿಯರ್‌ಗಳಾದ ಮೃತ್ಯುಂಜಯ, ಮೋಹನ್, ಕೃಷ್ಣಮೂರ್ತಿ ನೇತೃತ್ವದಲ್ಲಿ ಆರೋಗ್ಯ ನಿರೀಕ್ಷಕರು, ಸಿಬ್ಬಂದಿ ಈ ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT