ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಮಳೆಗಾಲದಲ್ಲಿ ಒಟ್ಟು 118 ಸಾವು

Last Updated 11 ಜುಲೈ 2018, 17:39 IST
ಅಕ್ಷರ ಗಾತ್ರ

ಬೆಂಗಳೂರು: ಈ ವರ್ಷದ ಪ್ರಕೃತಿ ವಿಕೋಪಕ್ಕೆ ರಾಜ್ಯದಲ್ಲಿ ಒಟ್ಟು 118 ಮಂದಿ ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಐವನ್‌ ಡಿಸೋಜಾ ಅವರ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

115 ಪ್ರಕರಣದಲ್ಲಿ ₹4.59 ಕೋಟಿ ಬಿಡುಗಡೆ ಮಾಡಲಾಗಿದೆ. 698 ಜಾನುವಾರುಗಳು ಮೃತಪಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ₹58.05 ಲಕ್ಷ ಪರಿಹಾರ ನೀಡಲಾಗಿದೆ ಎಂದು ಅವರು ವಿವರಿಸಿದರು.

ಅಲ್ಲದೆ, ₹ 169.82 ಕೋಟಿ ಮೌಲ್ಯದ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್‌/ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ, ಪರಿಹಾರ ವಿತರಿಸಲಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT