ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಪಾಲಾದ ತ್ರಿಪುರಾ: ಮೇಘಾಲಯ ‘ಕೈ’ತಪ್ಪುವ ಸಾಧ್ಯತೆ

ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮಿತ್ರಪಕ್ಷದ ಸರ್ಕಾರ?
Last Updated 3 ಮಾರ್ಚ್ 2018, 16:40 IST
ಅಕ್ಷರ ಗಾತ್ರ

ಅಗರ್ತಲ, ಶಿಲ್ಲಾಂಗ್, ಕೊಹಿಮಾ: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ. ತ್ರಿಪುರಾದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ.

25 ವರ್ಷಗಳಿಂದ ಸಿಪಿಐ(ಎಂ) ಆಡಳಿತದಲ್ಲಿದ್ದ ತ್ರಿಪುರಾದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಮಿತ್ರಪಕ್ಷಗಳು ಸ್ಪಷ್ಟ ಬಹುಮತ ಗಳಿಸಿವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಪ್ಲಬ್‌ ಕುಮಾರ್ ದೇಬ್ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನಾಗಾಲ್ಯಾಂಡ್‌ನಲ್ಲಿ ನಾಗಾ ಫಿಪಲ್ಸ್ ಫ್ರಂಟ್‌ (ಎನ್‌ಪಿಎಫ್‌) ಅತಿ ಹೆಚ್ಚು ಸ್ಥಾನ ಗಳಿಸಿದೆ. ಎನ್‌ಡಿಪಿಪಿ (ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿ) ಎರಡನೇ ಅತಿ ಹೆಚ್ಚು ಸ್ಥಾನ ಗಳಿಸಿದ ಪಕ್ಷವಾಗಿದ್ದು, ಬಿಜೆಪಿ ಮೂರನೇ ಸ್ಥಾನದಲ್ಲಿದೆ. ಎನ್‌ಡಿಪಿಪಿ ಜತೆ ಬಿಜೆಪಿ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದೆ. ಈ ರಾಜ್ಯದಲ್ಲಿ ಮಿತ್ರಪಕ್ಷದೊಂದಿಗೆ ಸೇರಿಕೊಂಡು ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ಅಭಿಪ್ರಾಯಪಟ್ಟಿವೆ. ಇಲ್ಲಿ ಕಾಂಗ್ರೆಸ್ ಯಾವುದೇ ಸ್ಥಾನ ಗಳಿಸಿಲ್ಲ.

ಮೇಘಾಲಯದಲ್ಲಿ ಅತಂತ್ರ: ಮೇಘಾಲಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ. ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗಳಿಸಿರುವ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಬಿಜೆಪಿ ಸೇರಿದಂತೆ ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವುದಾಗಿ ನ್ಯಾಷನಲ್‌ ಪಿಪಲ್‌ ಪಾರ್ಟಿ (ಎನ್‌ಪಿಪಿ) ತಿಳಿಸಿದೆ.

ತ್ರಿಪುರಾದಲ್ಲಿ ಫೆಬ್ರುವರಿ18, ನಾಗಾಲ್ಯಾಂಡ್‌ ಮತ್ತು ಮೇಘಾಲಯಗಳಲ್ಲಿ ಫೆಬ್ರುವರಿ 27ರಂದು ಚುನಾವಣೆ ನಡೆದಿತ್ತು. ಈಶಾನ್ಯದ 7 ರಾಜ್ಯಗಳ ಪೈಕಿ ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮಣಿಪುರದಲ್ಲಿ ಈಗಾಗಲೇ ಬಿಜೆಪಿ ಅಧಿಕಾರದಲ್ಲಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT