ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ ಸಿಟಿ ಯೋಜನೆಗೆ ₹14,798 ಕೋಟಿ

Last Updated 18 ಜುಲೈ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸ್ಮಾರ್ಟ್‌ ಸಿಟಿ ಯೋಜನೆಗೆ ಆಯ್ಕೆಯಾಗಿರುವ 7 ನಗರಗಳಿಗೆ ₹ 14,798 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು.

ಸ್ಮಾರ್ಟ್‌ ಸಿಟಿಗಳಾಗಿ ಆಯ್ಕೆಯಾಗಿರುವ ನಗರಗಳ ಅಧಿಕಾರಿಗಳ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 50:50 ಅನುಪಾತದಲ್ಲಿ ಹಣವನ್ನು ನೀಡಲಿವೆ. ಪ್ರತಿ ಸ್ಮಾರ್ಟ್‌ ಸಿಟಿಗೆ ಒಬ್ಬರಂತೆ ವ್ಯವಸ್ಥಾಪಕ ನಿರ್ದೇಶಕರನ್ನು ನಿಯೋಜಿಸಲಾಗಿದೆ. ಇವರು ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿಗಳನ್ನು ಕೈಗೊಳ್ಳುವರು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗುತ್ತದೆ. ಸ್ಮಾರ್ಟ್‌ ಸಿಟಿ ಕಾಮಗಾರಿ ನಡೆಸುವ ಪೂರ್ಣ ಜವಾಬ್ದಾರಿ ಈ ಸಮಿತಿಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸ್ಮಾರ್ಟ್‌ ಸಿಟಿ ಅಭಿವೃದ್ಧಿ ಕಾಮಗಾರಿ ಚಾಲನೆ ನೀಡಲಾಗಿದೆ. ₹190 ಕೋಟಿ ವೆಚ್ಚದಲ್ಲಿ 17 ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಕೆ.ಆರ್‌.ಮಾರುಕಟ್ಟೆ ಮತ್ತು ರಸಲ್‌ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT