ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುವಳ್ಳಿ : ಪಂಚಾಯ್ತಿ ಅಧ್ಯಕ್ಷರ ಅವಿರೋಧ ಆಯ್ಕೆ

Last Updated 8 ಮಾರ್ಚ್ 2018, 10:47 IST
ಅಕ್ಷರ ಗಾತ್ರ

ಹಿರಿಯೂರು: ‘ಕಾಂಗ್ರೆಸ್ ಬೆಂಬಲಿತ ಸದಸ್ಯರು ನನಗೆ ಮತ ನೀಡುವಂತೆ ಮಾಡಿ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಲು ಶಾಸಕ ಡಿ.ಸುಧಾಕರ್ ಅವರ ಪ್ರಯತ್ನವೇ ಕಾರಣ ಎಂದು ಮಂಗಳವಾರ ನಡೆದ ಚುನಾವಣೆಯಲ್ಲಿ ಉಡುವಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ಆಯ್ಕೆಯಾದ ಸುವರ್ಣಮ್ಮ ಉಮೇಶ್ ಹೇಳಿದರು.

ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಸುದ್ದಿಗಾರರ ಜತೆ ಸಂತಸ ಹಂಚಿಕೊಂಡ ಅವರು, ‘ಸದಸ್ಯೆಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಇರುವ ಕಾರಣ ಅಧ್ಯಕ್ಷ ಹುದ್ದೆ ನಿಭಾಯಿಸುವುದು ಕಷ್ಟವಲ್ಲ. ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ದುಡಿಯುತ್ತೇನೆ’ ಎಂದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಉಪಾಧ್ಯಕ್ಷೆ ಜಯಲಕ್ಷ್ಮಿ, ಮಾಜಿ ಅಧ್ಯಕ್ಷೆ ಮಮತಾ ಮಂಜುನಾಥ, ರತ್ನಮ್ಮ, ಗಂಗಾಧರಪ್ಪ, ಪರಮೇಶ್ವರಪ್ಪ, ಬಾಲಣ್ಣ, ಮಂಜುಳ, ಸಿದ್ದೇಶ್ ನಾಯ್ಕ, ಮಹಲಿಂಗಪ್ಪ, ರಾಜಮ್ಮ, ರತ್ನಮ್ಮ, ನಾಗವೇಣಿ, ಎಚ್.ಸಿ. ರಾಜಣ್ಣ, ರಂಗಸ್ವಾಮಿ, ಸಣ್ಣಯ್ಯ, ಶಾಂತಮ್ಮ, ತಿಪ್ಪೇರುದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT