ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಸಾ, ಬಂಡೂರಿ ನಿರ್ಲಕ್ಷ್ಯಕ್ಕೆ ಖಂಡನೆ

ಡಿ.ಸಿ ಕಚೇರಿ ಎದುರು ನವ ಕರ್ನಾಟಕ ಯುವಶಕ್ತಿ ಪ್ರತಿಭಟನೆ
Last Updated 21 ಜುಲೈ 2018, 14:23 IST
ಅಕ್ಷರ ಗಾತ್ರ

ಹಾಸನ : ರಾಜ್ಯ ಬಜೆಟ್‌ನಲ್ಲಿ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಕೈಬಿಟ್ಟಿರುವುದನ್ನು ವಿರೋಧಿಸಿ ನವ ಕರ್ನಾಟಕ ಯುವಶಕ್ತಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಮೂರು ವರ್ಷದಿಂದ ಯೋಜನೆ ಜಾರಿಗೆ ಆಗ್ರಹಿಸಿ ರೈತರ ಹೋರಾಟ ನಡೆಯುತ್ತಲೇ ಬಂದಿದೆ. ಈ ಬಗ್ಗೆ ಸರ್ಕಾರಗಳು ರೈತರಿಗೆ ಸುಳ್ಳು ಆಶ್ವಾಸನೆ ನೀಡಿ, ಮೋಸ ಮಾಡುತ್ತಾ ಬಂದಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನರಗುಂದಕ್ಕೆ ಭೇಟಿ ನೀಡಿ ರೈತರಿಗೆ ಆಶ್ವಾಸನೆ ನೀಡಿದ್ದರು. ಈಗ ಅದನ್ನು ಮರೆತ್ತಿದ್ದಾರೆ. ಈಗಲಾದರೂ ಕೇಂದ್ರ ಸರ್ಕಾರದ ಗಮನಕ್ಕೂ ತಂದು ಶೀಘ್ರ ಯೋಜನೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದು ಮನವಿ ಮಾಡಿದರು.

ನವ ಕರ್ನಾಟಕ ಯುವಶಕ್ತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ. ಶಂಕರಗೌಡ, ಜಿಲ್ಲಾ ಅಧ್ಯಕ್ಷ ಸಂತೋಷ್ ಗೌಡ, ಗೌರವಾಧ್ಯಕ್ಷ ಬ್ಯಾಂಕ್ ಮಂಜುನಾಥ್, ತಾಲ್ಲೂಕು ಘಟಕ ಅಧ್ಯಕ್ಷ ವೆಂಕಟೇಶ್, ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ, ಜಿಲ್ಲಾ ಉಪಾಧ್ಯಕ್ಷ ನಂದೀಶ್, ಯುವ ಘಟಕದ ಕಿರಣ್‌ಗೌಡ, ನಗರ ಉಪಾಧ್ಯಕ್ಷ ಜಿ.ಟಿ. ನಾಗೇಶ್, ಮೋಹನ್. ಪಚ್ಚೇಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT