ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಪಾಸ್ಪೋರ್ಟ್ ಹಾಗೂ ರಾಷ್ಟ್ರೀಯತೆಯ ಗುರುತಿನ ಚೀಟಿ ರದ್ದು ಮಾಡುವಂತೆ ವಿಶೇಷ ನ್ಯಾಯಾಲಯ ಪಾಕಿಸ್ತಾನ ಸರ್ಕಾರಕ್ಕೆ ಆದೇಶಿಸಿದೆ.
ದುಬೈನಲ್ಲಿ ನೆಲೆಸಿರುವ ಮುಷರಫ್ ಅವರನ್ನು ಬಂಧಿಸಿ, ಅವರ ಎಲ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕಳೆದ ವಾರ ಆದೇಶ ಹೊರಡಿಸಿತ್ತು.