ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್‌ ರಾಜ್‌ಕುಮಾರ್ 43ನೇ ಹುಟ್ಟುಹಬ್ಬ: ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

Last Updated 17 ಮಾರ್ಚ್ 2018, 8:39 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ನಟ ಪುನೀತ್ ರಾಜ್‌ಕುಮಾರ್ (ಜನನ: 1975). ಅವರಿಗೆ ಶನಿವಾರ 43ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರೂ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಕೋರಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಬೆಟ್ಟದಹೂವು, ಭಕ್ತ ಪ್ರಹ್ಲಾದ ಇವರು ಬಾಲನಟನಾಗಿ ಛಾಪು ಮೂಡಿಸಿದ ಚಿತ್ರಗಳು. ‘ಅಪ್ಪು’ ಸಿನಿಮಾದ ಮೂಲಕ ಮೊದಲ ಬಾರಿಗೆ ನಾಯಕನಾಗಿ ಬಣ್ಣ ಹಚ್ಚಿದರು.

ನಟನಾಗಿ, ಗಾಯಕನಾಗಿ ಗುರುತಿಸಿಕೊಂಡಿದ್ದ ಪುನೀತ್ ‘ಪಿಆರ್‌ಕೆ ಪ್ರೊಡಕ್ಷನ್‌’ (ಪಾರ್ವತಮ್ಮ ರಾಜಕುಮಾರ್‌ ಪ್ರೊಡಕ್ಷನ್‌) ಹೆಸರಿನ ಸಂಸ್ಥೆಯಡಿ ಸಿನಿಮಾ ನಿರ್ಮಿಸುತ್ತಿದ್ದಾರೆ. ಈಚೆಗೆ ಬಿಡುಗಡೆಯಾದ ‘ರಾಜಕುಮಾರ’ ಸಹ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT