ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲಿಗೆ ಅತಿಯಾದ ವಿಶ್ವಾಸವೇ ಕಾರಣ

Last Updated 17 ಮಾರ್ಚ್ 2018, 7:03 IST
ಅಕ್ಷರ ಗಾತ್ರ

ಬಂಗಾರಪೇಟೆ: ಬಿಜೆಪಿ ಕಾರ್ಯಕರ್ತರ ಅತಿಯಾದ ವಿಶ್ವಾಸದಿಂದಾಗಿ ಉತ್ತರ ಪ್ರದೇಶದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲುಣಬೇಕಾಯಿತು. ಇಲ್ಲಿ ಹಾಗಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಸಚಿವ ತಾವರಚಂದ್ ಗೆಹ್ಲೋಟ್ ಹೇಳಿದರು.

ಪಟ್ಟಣದ ಎಸ್‌ವಿಆರ್ ಕಲ್ಯಾಣ ಮಂಪಟದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಿಜೆಪಿ ಪಕ್ಷದ ಬೂತ್ ಸಮಿತಿಯ ವಿಷೇಶ ಸಭೆಯಲ್ಲಿ ಮಾತನಾಡಿ, ಪಕ್ಷ ದೇಶದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕೆ ಪ್ರಥಮ ಆದ್ಯತೆ ನೀಡುತ್ತದೆ ಎಂದರು.

ಆಂಧ್ರಪ್ರದೇಶ ಟಿಡಿಪಿ ಪಕ್ಷದೊಂದಿಗಿನ ಬಿಕ್ಕಟ್ಟು ತಾತ್ಕಾಲಿಕವಾಗಿದ್ದು, ಅದನ್ನು ಮಂದುವರಿಸಲು ಬಿಜೆಪಿಗೆ ಇಷ್ಟವಿಲ್ಲ. ಬಿಕ್ಕಟ್ಟಿನ ಶಮನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೂತ್ ಮಟ್ಟದಿಂದ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವುದು ಪ್ರಮುಖ ಉದ್ದೇಶವಾಗಿದೆ. ಈ ಪ್ರಕ್ರಿಯೆ ಉತ್ತರಪ್ರದೇಶದಿಂದ ಆರಂಭಗೊಂಡಿದ್ದು, ರಾಜ್ಯದಲ್ಲಿಯೂ ಮುಂದುವರೆಸಲಾಗಿದೆ. ಬಂಗಾರಪೇಟೆ ಮೀಸಲು ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಎಡವಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಪಕ್ಷದ ಅಭ್ಯರ್ಥಿಗಳ ಘೋಷಣೆ ಬಗ್ಗೆ ಪ್ರಸ್ತಾಪಿಸಿದ ಅವರು ನಾಮಪತ್ರ ಸಲ್ಲಿಸುವ ಮುನ್ನ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು. ಅಲ್ಲಿಯತನಕ ಎಲ್ಲರೂ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ಈ ಬಗ್ಗೆ ಆಕಾಂಕ್ಷಿಗಳ ನಡೆ ನುಡಿಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು ಎಂದರು.

ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಮಾತನಾಡಿ, ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಇಬ್ಬರು ಆಕಾಂಕ್ಷಿಗಳಿದ್ದು, ಈ ಬಗ್ಗೆ ವಾಟ್ಸಪ್, ಅಂತರ್ಜಾಲದಲ್ಲಿ ಕೆಲ ವಿರೋಧಿಗಳು ಒಮ್ಮೆ ಬಿ.ಪಿ.ವೆಂಕಟಮುನಿಯಪ್ಪ ಅವರಿಗೆ ಟಿಕೆಟ್ ಎಂದು, ಮತ್ತೊಮ್ಮೆ ಎಂ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಎಂದು ಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿದ್ದು, ಸ್ಪಷ್ಟ ಸೂಚನೆ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಕುತಂತ್ರದಿಂದ ಪಕ್ಷಕ್ಕೆ ಇಲ್ಲಿ ಸೋಲಾಯಿತು. ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳಿದರು.

ಜಿಲ್ಲಾ ಘಟಕ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಕ್ಷೇತ್ರದ ಅಭಿವೃದ್ಧಿ ಹಾಗೂ ಭ್ರಷ್ಟ ರಾಜಕಾರಣಿಗಳಿಗೆ ಬುದ್ಧಿ ಕಲಿಸಲು ಜನರು ಬಿಜೆಪಿ ಪರವಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಸಚ್ಚಿದಾನಂದ ಮೂರ್ತಿ, ತಾಲ್ಲೂಕು ಘಟಕದ ಅಧ್ಯಕ್ಷ ಹನುಮಪ್ಪ, ಡಿಂಪು ನಾರಾಯಣಸ್ವಾಮಿ, ಮಧುಸೂದನ್, ಮೊಹನ್ಮೂರ್ತಿ, ಜಿ.ಪಂ ಸದಸ್ಯ ಬಿ.ವಿ.ಮಹೇಶ್, ಶ್ರೀನಿವಾಸಗೌಡ, ಕೆ.ವಿ.ಶಿವಪ್ರಕಾಶ್, ಮಾರ್ಕಂಡೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT