ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಕಾಮಗಾರಿ ಪರಿಶೀಲನೆ

Last Updated 17 ಮಾರ್ಚ್ 2018, 7:18 IST
ಅಕ್ಷರ ಗಾತ್ರ

ಸೋಮವಾರಪೇಟೆ: ಸಮೀಪದ ತಣ್ಣೀರುಹಳ್ಳ ಗ್ರಾಮದಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ ಮಹೇಂದ್ರಕುಮಾರ್ ಪರಿಶೀಲಿಸಿದರು.

‘ತಣ್ಣೀರುಹಳ್ಳ ಗ್ರಾಮದಲ್ಲಿ ಎಸ್ಇಪಿ ಯೋಜನೆಯಡಿ ₹ 10 ಲಕ್ಷ ವೆಚ್ಚದಲ್ಲಿ ಎರಡು ರಸ್ತೆಗಳ ಕಾಂಕ್ರೀಟೀಕರಣ ನಡೆಯುತ್ತಿದ್ದು, ಇದಕ್ಕೆ ಬಳಸುತ್ತಿರುವ ಸಾಮಗ್ರಿಗಳು ಕಳಪೆಯಾಗಿದೆ.

ಬಾಣಾವರ ಕಲ್ಲುಕೋರೆಯಿಂದ ನಿರುಪಯುಕ್ತವಾಗಿರುವ ಕಲ್ಲಿನ ಪುಡಿಯನ್ನು ತಂದು ವೆಟ್‌ಮಿಕ್ಸ್ ಎಂದು ರಸ್ತೆಗೆ ಹಾಕಲಾಗುತ್ತಿದೆ’ ಎಂದು ಆರೋಪಿಸಿದ ಗ್ರಾಮಸ್ಥರು, ತಕ್ಷಣ ಈ ಸಾಮಗ್ರಿಗಳನ್ನು ತೆರವುಗೊಳಿಸ ಬೇಕೆಂದು ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT