ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತ್ರೀಶಕ್ತಿ ಸಂಘಗಳಿಂದ ಅಭಿವೃದ್ಧಿ ಸಾಧ್ಯ: ಶಾಸಕ

ಮಹಿಳಾ ದಿನಾಚರಣೆಯಲ್ಲಿ ಶಾಸಕ ಮಾಲೀಕಯ್ಯ ಅಭಿಮತ
Last Updated 17 ಮಾರ್ಚ್ 2018, 8:28 IST
ಅಕ್ಷರ ಗಾತ್ರ

ಅಫಜಲಪುರ: ‘ಸ್ತ್ರೀಶಕ್ತಿ ಸಂಘಗಳು ರಚನೆಯಾಗಿದ್ದರಿಂದ ಮಹಿಳೆಯರಿಗೆ ಸಾಮಾಜಿಕ ಹಾಗೂ ಆರ್ಥಿಕವಾಗಿ ಸಹ
ಕಾರಿಯಾಗಿದೆ. ಅವರ ಸರ್ವಾಂಗೀಣ ಅಭಿವೃದ್ಧಿಗೆ ಸಂಘಗಳು ಕಾರಣವಾಗಿವೆ’ ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ತಿಳಿಸಿದರು.

ಪಟ್ಟಣದಲ್ಲಿ ಶುಕ್ರವಾರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರ ಸ್ತ್ರೀಶಕ್ತಿ ಸಂಘಗಗಳಿಗೆ ಪ್ರೋತ್ಸಾಹ ಧನ ನೀಡುತ್ತಿದೆ. ಅಲ್ಲದೇ ಕಡಿಮೆ ಬಡ್ಡಿ ದರದಲ್ಲಿ ಸಹಕಾರ ಸಂಘಗಳಿಂದ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ನೀಡಲಾಗುತ್ತಿದೆ’ ಎಂದು ತಿಳಿಸಿದರು.

‘ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ 50 ಮೀಸಲಾತಿ ಇದೆ. ಹೀಗಾಗಿ ಅವರು ಎಲ್ಲಾ ರಂಗಗಳಲ್ಲಿ ಪ್ರವೇಶ ಮಾಡುತ್ತಿದ್ದಾರೆ. ಮಹಿಳೆಯರಲ್ಲಿ ತಾಳ್ಮೆ, ಕ್ರಿಯಾಶೀಲ, ಪ್ರಾಮಾಣಿಕತೆ ಇರುವುದರಿಂದ ಯಾವುದೇ ವಲಯವನ್ನು ಅಭಿವೃದ್ಧಿ ಮಾಡಬಹುದಾಗಿದೆ’ ಎಂದರು.

ಎಪಿಎಂಸಿ ಅಧ್ಯಕ್ಷ ಶಂಕರಲಿಂಗ ಮೇತ್ರಿ, ಜಿಲ್ಲಾ ಮಹಿಳಾ ಸಂಘದ ಅಧ್ಯಕ್ಷೆ ದಿವ್ಯಾ ಹಾಗರಗಿ, ಪುರಸಭೆ ಅಧ್ಯಕ್ಷ ನಾಗಪ್ಪ ಆರೇಕರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಜಮಾದಾರ, ಬಿಸ್ಮಿಲ್ಲಾ ಬೇಗಂ ಎಸ್‌. ಖೇಡಗಿ, ಶಾಂತಾಬಾಯಿ ಬಿರಾದಾರ, ಸರೂಬಾಯಿ ಸ್ವಾಮಿ, ಶ್ರೀದೇವಿ ಕಾಲೆಬಾಗ, ಪ್ರಾಚಾರ್ಯ ಪರಮೇಶ್ವರ ಧನ್ನಿ ಕಾರ್ಯಕ್ರಮದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT