ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹1.2 ಕೋಟಿ ಮೌಲ್ಯದ ಚಿನ್ನ ವಶ

Last Updated 17 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಮಂಗಳೂರು: ದುಬೈನಿಂದ ಮುಂಬೈಗೆ ಹೊರಟಿದ್ದ ಜೆಟ್‌ ಏರವೇಸ್‌ನ ವಿಮಾನದ ಶೌಚಾಲಯದಲ್ಲಿ ಬಚ್ಚಿಡಲಾಗಿದ್ದ ₹1.2 ಕೋಟಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ವಶಪಡಿಸಿಕೊಂಡಿದ್ದಾರೆ.

ಜೆಟ್‌ ಏರವೇಸ್‌ನ 9 ಡಬ್ಲ್ಯು 531 ವಿಮಾನ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ, ಸಿಬ್ಬಂದಿಯ ಸಹಕಾರದಲ್ಲಿ ಈ ಚಿನ್ನವನ್ನು ಪತ್ತೆ ಮಾಡಲಾಯಿತು. ತಲಾ 1 ಕೆ.ಜಿ. ತೂಕದ ನಾಲ್ಕು ಗಟ್ಟಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಯಾರಿಗೆ ಸೇರಿದ್ದು ಎಂಬುದು ಪತ್ತೆಯಾಗಿಲ್ಲ.

ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕನ ಗುದದ್ವಾರದಲ್ಲಿ ಬಚ್ಚಿಡಲಾಗಿದ್ದ 230 ಗ್ರಾಂ ತೂಕದ 2 ಚಿನ್ನದ ಬಿಸ್ಕಿಟ್‌ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ₹7 ಲಕ್ಷ ಎಂದು ಅಂದಾಜಿಸಲಾಗಿದೆ.

ಒಂದೇ ದಿನ ಇಷ್ಟೊಂದು ಮೊತ್ತದ ಚಿನ್ನವನ್ನು ಪತ್ತೆ ಮಾಡಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಕಸ್ಟಮ್ಸ್‌ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT