ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಬಂಡಾಯ ಶಾಸಕರ ಅನರ್ಹತೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸ್ಪೀಕರ್‌

Last Updated 19 ಮಾರ್ಚ್ 2018, 9:09 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ನ 7 ಬಂಡಾಯ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಪೂರ್ಣಗೊಂಡಿದ್ದು ಸ್ಪೀಕರ್‌ ತೀರ್ಪು ಅನ್ನು ಕಾಯ್ದಿರಿಸಿದ್ದಾರೆ.

ಜೆಡಿಎಸ್ ಪಕ್ಷದ ವಿಪ್‌ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದ ಏಳು ಮಂದಿ ಭಿನ್ನಮತೀಯ ಶಾಸಕರನ್ನು 1986ರ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ಜೆಡಿಎಸ್‌ ಪಕ್ಷ ದೂರು ಸಲ್ಲಿಸಿತ್ತು.

ಸ್ಪೀಕರ್ ಕೆ.ಬಿ. ಕೋಳಿವಾಡ ಅವರು ವಿಚಾರಣೆ ನಡೆಸಿದ್ದು ಅಂತಿಮ ತೀರ್ಪನ್ನು ಕಾಯ್ದಿರಿಸಿದ್ದಾರೆ.

ಕಿರುಕುಳ: ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ. ಕೋರ್ಟ್‌ ತೀರ್ಮಾನಕ್ಕಿಂತ ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಜನರ ತೀರ್ಮಾನ ಮುಖ್ಯ ಎಂದು ಬಂಡಾಯ ಶಾಸಕ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT