ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ವಿರುದ್ಧ ತನಿಖೆಗೆ ಒತ್ತಾಯಿಸಿ ಧರಣಿ

ಸಾಗುವಳಿ ಚೀಟಿ ವಿತರಣೆಯಲ್ಲಿ ಅಕ್ರಮ: ಯುವ ಕಾಂಗ್ರೆಸ್‌ ಕಾರ್ಯಕರ್ತರ ಆರೋಪ
Last Updated 20 ಮಾರ್ಚ್ 2018, 10:35 IST
ಅಕ್ಷರ ಗಾತ್ರ

ಕೋಲಾರ: ಬಗರ್ ಹುಕುಂ ಸಾಗುವಳಿ ಚೀಟಿ ವಿತರಣೆಯಲ್ಲಿ ಶಾಸಕ ವರ್ತೂರು ಪ್ರಕಾಶ್‌ ಅಕ್ರಮ ಎಸಗಿದ್ದು, ಈ ಸಂಬಂಧ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

‘ಶಾಸಕ ವರ್ತೂರು ಪ್ರಕಾಶ್‌ ಹಾಗೂ ಅವರ ಪರಮಾಪ್ತ ಬೆಗ್ಲಿ ಸೂರ್ಯಪ್ರಕಾಶ್‌ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಜಮೀನುಗಳನ್ನು ಬಗರ್‌ ಹುಕುಂ ಸಮಿತಿ ಮೂಲಕ ಅನರ್ಹರಿಗೆ ಮಂಜೂರು ಮಾಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರಿಗೆ ಕೋಟ್ಯಂತರ ರೂಪಾಯಿ ಸಂದಾಯವಾಗಿದೆ’ ಎಂದು ಆರೋಪಿಸಿದರು.

‘ಶಾಸಕರು ತಾಲ್ಲೂಕು ಕಚೇರಿ, ಕಂದಾಯ ಹಾಗೂ ಭೂದಾಖಲೆ ಇಲಾಖೆ ಅಧಿಕಾರಿಗಳನ್ನು ದುರ್ಬಳಕೆ ಮಾಡಿ
ಕೊಂಡು ಅಕ್ರಮ ಎಸಗಿದ್ದಾರೆ. ಜಾನುವಾ
ರುಗಳ ಸಂಖ್ಯೆಗೆ ಅನುಗುಣವಾಗಿ ಗೋಮಾಳಕ್ಕೆ ಜಮೀನು ಮೀಸಲಿಡಬೇಕೆಂಬ ನಿಯಮವಿದೆ. ಆದರೆ, ಅಧಿಕಾರಿಗಳು ಈ ನಿಯಮ ಉಲ್ಲಂಘಿಸಿದ್ದಾರೆ’ ಎಂದು ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ನವೀನ್‌ಕುಮಾರ್ ದೂರಿದರು.

‘ಬಗರ್‌ ಹುಕುಂ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿದ್ದವರ ಬದಲಿಗೆ ಅನರ್ಹರಿಗೆ ಜಮೀನು ಮಂಜೂರು ಮಾಡಲಾಗಿದೆ. 4.38 ಎಕರೆಗೂ ಹೆಚ್ಚು ಜಮೀನು ಹೊಂದಿರುವವರಿಗೆ ಹೊಸದಾಗಿ ಸರ್ಕಾರಿ ಭೂಮಿ ಕೊಡಬಾರದೆಂಬ ನಿಯಮವನ್ನು ಗಾಳಿಗೆ ತೂರಲಾಗಿದೆ. ಕಡತ ಲಭ್ಯವಿಲ್ಲವೆಂಬ ಕಾರಣ ನೀಡಿ ನಕಲಿ ದಾಖಲೆಪತ್ರ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲಾಗಿದೆ’ ಎಂದರು.

ನಕಲಿ ದಾಖಲೆಪತ್ರ: ‘ನಿಯಮದ ಪ್ರಕಾರ ಬಗರ್‌ ಹುಕುಂ ಸಮಿತಿಗೆ ಶಾಸಕರು ಅಧ್ಯಕ್ಷರಾಗಿರಬೇಕು. ಆದರೆ, ವರ್ತೂರು ಪ್ರಕಾಶ್‌ ಸಮಿತಿಗೆ ತನ್ನ ಬೆಂಬಲಿಗ ಬೆಗ್ಲಿ ಪ್ರಕಾಶ್‌ರನ್ನು ನಿಯೋಜಿಸಿದ್ದರು. ಅರ್ಹ ಅರ್ಜಿದಾರರಿಗೆ ಭೂಮಿ ಹಂಚಿಕೆ ವಿಚಾರದಲ್ಲಿ ತಕರಾರು ಇಲ್ಲ. ಆದರೆ, ಸಮಿತಿಯು ಅನರ್ಹರ ಅರ್ಜಿಗಳನ್ನು ಕಡತಕ್ಕೆ ಸೇರಿಸಿದೆ. ಅರ್ಜಿ ಸಲ್ಲಿಸದ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ದಾಖಲೆಪತ್ರ ಮತ್ತು ಕಡತ ಸೃಷ್ಟಿಸಿ ಹಕ್ಕು ಪತ್ರ ನೀಡಲಾಗಿದೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಅಕ್ರಮದ ಸಂಬಂಧ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ
ಗಳನ್ನು ಅಮಾನತು ಮಾಡಬೇಕು. ಅನರ್ಹರಿಂದ ಜಮೀನು ಹಿಂಪಡೆಯ
ಬೇಕು’ ಎಂದು ಒತ್ತಾಯಿಸಿದರು.

ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ರಾಜ್‌ಕುಮಾರ್, ವೈ.ಶಿವಕುಮಾರ್, ಸದಸ್ಯರಾದ ಕಾರ್ತಿಕ್‌, ಚಂದ್ರಶೇಖರ್, ಮಣಿ, ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT