ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಳೆಗಾಲಕ್ಕೂ ಮುನ್ನವೇ ರಾಜಕಾಲುವೆ ಕಾಮಗಾರಿ ಮುಗಿಸಿ’

Last Updated 20 ಮಾರ್ಚ್ 2018, 19:37 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೈಗೊಂಡಿರುವ ರಾಜಕಾಲುವೆಗಳ ಕಾಮಗಾರಿಗಳನ್ನು ಮಳೆಗಾಲ ಆರಂಭವಾಗುವ ಮುನ್ನವೇ ಪೂರ್ಣಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಿಕ್ಕಪೇಟೆ, ಶಾಂತಿನಗರ ಮತ್ತು ಮಹಾಲಕ್ಷ್ಮಿ ಬಡಾವಣೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳನ್ನು ಅವರು ಮಂಗಳವಾರ ಪರಿಶೀಲಿಸಿದರು. ಶಾಸಕರಾದ ಎನ್‌.ಎ.ಹ್ಯಾರಿಸ್‌, ಆರ್‌.ವಿ.ದೇವರಾಜ್‌, ಕೆ.ಗೋಪಾಲಯ್ಯ ಇದ್ದರು.

ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದ ಬಳಿಯ ರಾಜಕಾಲುವೆಯ ತಡೆಗೋಡೆಯ ಎತ್ತರ ಕಡಿಮೆ ಇದ್ದು, ಮಳೆ ಬಂದಾಗ ನೀರು ಉಕ್ಕಿ ಹರಿಯುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ 1.1 ಕಿ.ಮೀ. ಉದ್ದದ ಪರ್ಯಾಯ ಕಾಲುವೆ ನಿರ್ಮಿಸಲು ನಗರೋತ್ಥಾನ ಯೋಜನೆಯಡಿ ₹15 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಸಚಿವರು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT